ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕ ಮರುಪಾವತಿ ಯೋಜನೆ ಅರ್ಜಿ ಆಹ್ವಾನ.

ಕೊಪ್ಪಳ ಆ. ೦೭ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪ್ರಸಕ್ತ  ಸಾಲಿನ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲು ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಕ್ರೀಡೆಯಲ್ಲಿ ಭಾಗವಹಿಸಿ ಕ್ರೀಡಾಪಟುಗಳು ವಿಜೇತರಾಗಿರಬೇಕು.  ಪ್ರಥಮ ವರ್ಷದ ಪಿ.ಯು.ಸಿ.ಯಿಂದ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕ್ರೀಡಾಪಟುಗಳು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.  ಆಯಾ ವರ್ಷದ ಶೈಕ್ಷಣಿಕ ಶುಲ್ಕವನ್ನು ಹಿಂದಿನ ೫ ವರ್ಷಗಳ ಕ್ರೀಡಾಸಾಧನೆಯನ್ನು ಪರಿಗಣಿಸಿ ನೀಡಲಾಗುವುದು. ಅರ್ಹ ಕ್ರೀಡಾಪಟುಗಳು ಅರ್ಜಿಯನ್ನು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಪಡೆದು ಆಗಸ್ಟ್ ೩೦ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಯನ್ನು ಖುದ್ದಾಗಿ ಕಚೇರಿಯಿಂದ ಅಥವಾ ದೂರವಾಣಿ ಸಂಖ್ಯೆ ೦೮೫೩೯-೨೦೧೪೦೦ಗೆ ಸಂಪರ್ಕಿಸಿ ಪಡೆಯಬಹುದು ಎಂದು ಸಹಾಯಕ ನಿರ್ದೇಶಕರಾದ ಶಾರದಾ ನಿಂಬರಗಿ ಅವರು ತಿಳಿಸಿದ್ದಾರೆ.
Please follow and like us:
error