ಕೆಎಂಸಿ ಪ್ರಧಾನ ಕಾರ್ಯದರ್ಶಿಯಾಗಿ ದೇವು ನಾಗನೂರ ಆಯ್ಕೆ

 ಕೊಪ್ಪಳ ಮೀಡಿಯಾ ಕ್ಲಬ್‌ನ ನೂತನ ಪ್ರದಾನ ಕಾರ್ಯದರ್ಶಿಯಾಗಿ ವಿಜಯವಾಣಿ ಪತ್ರಿಕೆಯ ಜಿಲ್ಲಾ ವರದಿಗಾರ ದೇವು ನಾಗನೂರ ಆಯ್ಕೆಯಾಗಿದ್ದಾರೆ. ಇಲ್ಲಿಯವರೆಗೆ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬಸವರಾಜ್ ಕರುಗಲ್‌ರವರು ತಮ್ಮ ವೈಯುಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ದೇವು ನಾಗನೂರರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. 

         ಕೊಪ್ಪಳ ಮೀಡಿಯಾ ಕ್ಲಬ್‌ನಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ಲೆಕ್ಕಪತ್ರಗಳನ್ನು ಒಪ್ಪಿಸುವ ಕಾರ‍್ಯಕ್ರಮದ ನಂತರ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ಆಯ್ಕೆಗೆ ಸಭೆಯು ಸರ್ವಾನುಮತದಿಂದ ಅನುಮೋದಿಸಿದರು. ನೂತನ ಪ್ರಧಾನ ಕಾರ್ಯದರ್ಶಿ ದೇವು ನಾಗನೂರರಿಗೆ ಮೀಡಿಯಾ ಕ್ಲಬ್ ಸರ್ವ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ. 
Please follow and like us:
error