You are here
Home > Koppal News > ಹೈ.ಕ ಭಾಗಕ್ಕೆ ವಿಶೇಷ ಸ್ಥಾನಮಾನಕ್ಕಾಗಿ ಒತ್ತಾಯಿಸಿ ಯಲಬುರ್ಗಾ ಬಂದ್

ಹೈ.ಕ ಭಾಗಕ್ಕೆ ವಿಶೇಷ ಸ್ಥಾನಮಾನಕ್ಕಾಗಿ ಒತ್ತಾಯಿಸಿ ಯಲಬುರ್ಗಾ ಬಂದ್

ಯಲಬುರ್ಗಾ : 371 ಕಲಂ ಜಾರಿಗೆ ಒತ್ತಾಯಿಸಿ ಯಲಬುರ್ಗಾ ಬಂದ್ ಯಶಸ್ವಿಯಾಗಿ ನಡೆಯಿತು. ವಿವಿಧ ಸಂಘಟನೆಗಳವರು ನೀಡಿದ್ದ ಬಂದ್ ಕರೆಗೆ ಜನತೆ ಉತ್ತಮವಾಗಿ ಪ್ರತಿಕ್ರಿಯಿಸಿತು. ವ್ಯಾಪಾರಿಗಳು ಸ್ವಯಂಪ್ರೇರಿತರಾಗಿ ಅಂಗಡಿಗಳನ್ನು ಬಂದ್ ಮಾಡಿದ್ದರು. ಸ್ಥಳೀಯ ಸಂಸ್ಥಾನ ಹಿರೇಮಠದ ಸಿದ್ದರಾಮೇಶ್ವರ ಸ್ವಾಮಿಜಿ ಹಾಗೂ ಶ್ರೀಧರ ಮುರಡಿ ಹಿರೇಮಠದ ಬಸವಲಿಂಗೇಶ್ವರ ಸ್ವಾಮಿಜಿ ನೇತೃತ್ವದಲ್ಲಿ ಮೊಗ್ಗಿ ಬಸವೇಶ್ವರ ದೇವಸ್ಥಾನದಿಂದ ಹೊರಟ ಮೆರವಣಿಗೆ ನಗರದ ವಿವಿದೆಡೆಗಳಲ್ಲಿ ಸಂಚರಿಸಿ ಕಿತ್ತೂರು ಚೆನ್ನಮ್ಮ ವೃತ್ತದ ಬಳಿ ಸಭೆ ನಡೆಸಲಾಯಿತು. ನಂತರ ತಹಶೀಲ್ದಾರರಿಗೆ ಮನವಿ ಅರ್ಪಿಸಲಾಯಿತು. ಬಂದ್ ನಲ್ಲಿ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು, ಊರಿನ ಪ್ರಮುಖರು ಪಾಲ್ಗೊಂಡಿದ್ದರು

Leave a Reply

Top