fbpx

ಒಂದು ಲಕ್ಷ ಶೌಚಾಲಯಗಳ ನಿರ‍್ಮಾಣದ ಗುರಿ-ಸಚಿವ ಶಿವರಾಜ್ ತಂಗಡಗಿ

ಕೊಪ್ಪಳ : ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಕರ್ನಾಟಕ ರಾಜ್ಯದಲ್ಲಿ  ಕೊಪ್ಪಳ ಜಿಲ್ಲೆಯು ೩೯ ಗ್ರಾಮಗಳನ್ನು ಸಂಪೂರ್ಣ ಬಯಲು ಬಹಿರ್ದೆಸೆ ಮುಕ್ತ ಗ್ರಾಮಗಳನ್ನಾಗಿ ಮಾಡಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆದಿದೆ. ಈಗಾಗಲೇ ಜಿಲ್ಲೆಯಲ್ಲಿ ೯೩ ಸಾವಿರ ಶೌಚಾಲಯಗಳನ್ನು ನಿರ್ಮಿಸಲಾಗಿದ್ದು ಶೀಘ್ರದಲ್ಲಿಯೇ ಒಂದು ಲಕ್ಷದ ಒಂದನೇ ಶೌಚಾಲಯ ನಿರ್ಮಿಸಿ ಮುಖ್ಯಮಂತ್ರಿಗಳಿಂದ ಉದ್ಘಾಟನೆ ಮಾಡಿಸಲಾಗುವುದು ಎಂದು ಸಣ್ಣ ನೀರಾವರಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ  ಸಚಿವ ಶಿವರಾಜ್ ತಂಗಡಗಿ ಹೇಳಿದರು. ಅವರು ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಿದ್ದರು. 
ಜಗತ್ತಿನ ಸಂವಿಧಾನಗಳನ್ನೆಲ್ಲ ಅಮೂಲಾಗ್ರವಾಗಿ ಪರಿಶೀಲಿಸಿ ಉತ್ತಮತೆಯನ್ನು ಆಯ್ದು ನಮ್ಮದೇ ಆದ, ನಮ್ಮ ಜನತೆಗೆ ಒಗ್ಗುವ ಸಂವಿಧಾನ ರೂಪಗೊಂಡು ಗಣರಾಜ್ಯವಾಗಿ ಘೋಷಣೆಗೊಂಡ ಈ ದಿನ ನಮ್ಮ ರಾಷ್ಟ್ರೀಯ ಹಬ್ಬ. ಇದ ಸಂಭ್ರಮದ ಸಡಗರದ ದಿನ. ಇದಕ್ಕಾಗಿ ನಾವು ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ರವರಿಗೆ ಚಿರಋಣಿಗಳಾಗಿರಬೇಕು.  ನಮ್ಮ ಸರಕಾರವು ಹಸಿದವನಿಗೆ ಅನ್ನವನಿಕ್ಕುವ ಮೂಲಕ ಕೈಲಾಸ ಕಾಣು ಎನ್ನುವ ಶರಣರ ತತ್ವದಂತೆ ಕೇವಲ ೧ರೂಗೆ ಅಕ್ಕಿ ದೊರೆಯುವ ಅನ್ನಭಾಗದಂತಹ ಜನಪ್ರಿಯ ಯೋಜನೆ ಯಶಸ್ವಿಯಾಗಿ ಜಾರಿಗೊಳಿಸಿದೆ. ರಾಜೀವ್ ಆರೋಗ್ಯ ಭಾಗ್ಯ ಯೋಜನೆಯ ಮೂಲಕ ಎಲ್ಲರಿಗೂ ಆರೋಗ್ಯ ಭದ್ರತೆ ಒದಗಿಸಿದ ಪ್ರಥಮ ರಾಜ್ಯ ಕರ್ನಾಟಕ ಎಂದು ಹೇಳಿದರು..  ಸರಕಾರದ ವಿವಿಧ ಯೋಜನೆಗಳು ಮತ್ತು ಫಲಾನುಭವಿಗಳ ವಿವರಗಳನ್ನು ತಮ್ಮ ಭಾಷಣದಲ್ಲಿ ನೀಡಿದರು. ಈ ಸಂದರ್ಭದಲ್ಲಿ ವಿವಿಧ ರಂಗದ ಸಾಧಕರಿಗೆ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು. 
ಈ ಸಂದರ್ಭದಲ್ಲಿ ಸಂಸದ ಸಂಗಣ್ಣ ಕರಡಿ, ಶಾಸಕ ರಾಘವೇಂದ್ರ ಹಿಟ್ನಾಳ, ನಗರಸಭೆಯ ಉಪಾಧ್ಯಕ್ಷ ಅಮ್ಜದ್ ಪಟೇಲ್, ಎಪಿಎಂಸಿಯ ಅಧ್ಯಕ್ಷ ಗವಿಸಿದ್ದಪ್ಪ ಮುದಗಲ್,  ಜಿಲ್ಲಾ ಪಂಚಾಯತ್ ಅಧ್ಯಕ್ಷ ಅಮರೇಶ ಕುಳಗಿ,ಜಿಲ್ಲಾಧಿಕಾರಿ ಆರ್.ಆರ್.ಜನ್ನು, ಎಸ್ಪಿ ಡಾ.ರಾಜಾ ಪಿ, ಕೊಪ್ಪಳ ನಗರಸಭಾ ಸದಸ್ಯರು ಹಾಗೂ ಗಣ್ಯರು ಉಪಸ್ಥಿತರಿದ್ದರು. 
Please follow and like us:
error

Leave a Reply

error: Content is protected !!