ಜಿಲ್ಲಾ ಯುವ ಪ್ರಶಸ್ತಿ, ಸಂಘ ಪ್ರಶಸ್ತಿಗೆ ಅರ್ಜಿ ಆಹ್ವಾನ

 ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಮಾನ್ಯತೆ ಪಡೆದ ಯುವಕ /ಯುವತಿ ಸಂಘಗಳ ಸದಸ್ಯರುಗಳಿಗೆ ೨೦೧೨-೧೩ನೇ ಸಾಲಿನ ಜಿಲ್ಲಾ ಯುವ ಪ್ರಶಸ್ತಿ ಹಾಗೂ ಸಂಘ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 
ಯುವಕ ಮತ್ತು ಯುವತಿ ಪ್ರಶಸ್ತಿಗಾಗಿ ಸಮಾಜ ಸೇವೆ, ಸಾಂಸ್ಕೃತಿಕ ಮತ್ತು ಇತರೆ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಮಾಡಿರುವ ಯುವಕ ಮತ್ತು ಯುವತಿಯರಿಗೆ ಪ್ರಶಸ್ತಿಯನ್ನು ನೀಡಲಾಗುವುದು,  ಯುವಕ ಮತ್ತು ಯುವತಿ ಸಂಘಗಳಿಗೆ ತಲಾ ಒಂದು ಪ್ರಶಸ್ತಿಗಾಗಿ ಸಮಾಜ ಸೇವೆ, ಸಾಂಸ್ಕೃತಿಕ ಮತ್ತು ಇತರೇ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಮಾಡಿರಬೇಕು.  ದಿನಾಂಕ : ೦೧-೦೪-೨೦೧೨ ರಿಂದ ೩೧-೦೩-೨೦೧೩ ರೊಳಗೆ ಸಾಧನೆ ಮಾಡಿದ್ದನ್ನು ಮಾತ್ರ ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರಶಸ್ತಿಗಳ ಅರ್ಜಿಗಳನ್ನು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಕೊಪ್ಪಳ ಈ ಕಾರ್ಯಾಲಯದಲ್ಲಿ ಪಡೆದು ಜ.೦೫ ರೊಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಕೊಪ್ಪಳ ದೂರವಾಣಿ ಸಂಖ್ಯೆ : ೦೮೫೩೯-೨೦೧೪೦೦ ಗೆ ಸಂಪರ್ಕಿಸಬಹುದಾಗಿದೆ.

Leave a Reply