ಜೂ.೨೧ ರಂದು ಲಿಂಗನಬಂಡಿ, ಬಳೂಟಗಿಯಲ್ಲಿ ವಸತಿ ಶಾಲೆ ಪ್ರಾರಂಭೋತ್ಸವ

 ಯಲಬುರ್ಗಾ ತಾಲೂಕಿನ ಲಿಂಗನಬಂಡಿ ಗ್ರಾಮದಲ್ಲಿ ಮೊರಾರ್ಜಿ ದೇಸಾಯಿ ಪ.ಜಾತಿ ವಸತಿ ಶಾಲೆ ಹಾಗೂ ಬಳೂಟಗಿ ಗ್ರಾಮದಲ್ಲಿ  ಕಿತ್ತೂರ ರಾಣಿ ಚೆನ್ನಮ್ಮ ಪ.ವರ್ಗದ ವಸತಿ ಶಾಲೆಗಳ ಪ್ರಾರಂಭೋತ್ಸವ ಸಮಾರಂಭ ಜೂ.೨೧ ರಂದು ನಡೆಯಲಿದೆ.
ಲಿಂಗನಬಂಡಿ ಗ್ರಾಮದಲ್ಲಿ ನೂತನವಾಗಿ ಮಂಜೂರಾದ ಮೊರಾರ್ಜಿ ದೇಸಾಯಿ ಪ.ಜಾತಿ ವಸತಿ ಶಾಲೆ ಪ್ರಾರಂಭೋತ್ಸವ ಅಂದು ಮಧ್ಯಾಹ್ನ ೧೨ ಗಂಟೆಗೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಲಿದ್ದು, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಹೆಚ್.ಆಂಜನೇಯ ಅವರು ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಶಾಸಕ ಬಸವರಾಜ ರಾಯರೆಡ್ಡಿ ಅವರು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್.ತಂಗಡಗಿ, ಜಿ.ಪಂ.ಅಧ್ಯಕ್ಷ ಅಮರೇಶ ಕುಳಗಿ, ಸಂಸದ ಸಂಗಣ್ಣ ಕರಡಿ, ಶಾಸಕರಾದ ಇಕ್ಬಾಲ್ ಅನ್ಸಾರಿ, ರಾಘವೇಂದ್ರ ಹಿಟ್ನಾಳ, ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಹಾಲಪ್ಪ ಆಚಾರ, ಅಮರನಾಥ ಪಾಟೀಲ್, ಜಿ.ಪಂ.ಉಪಾಧ್ಯಕ್ಷ ವಿನಯಕುಮಾರ ಮೇಲಿನಮನಿ, ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಅಶೋಕ ತೋಟದ, ತಾ.ಪಂ.ಹಂಗಾಮಿ ಅಧ್ಯಕ್ಷ ಫಕೀರಪ್ಪ ತಳವಾರ, ಹಿರೇಅರಳಿಹಳ್ಳಿ ಗ್ರಾ.ಪಂ.ಅಧ್ಯಕ್ಷೆ ಲಕ್ಷ್ಮವ್ವ ಗೆದಗೇರಿ, ಜಿ.ಪಂ.ಸದಸ್ಯ ರಾಮಣ್ಣ ಎಂ.ಸಾಲಭಾವಿ ಪಾಲ್ಗೊಳ್ಳುವರು.
  ಬಳೂಟಗಿ ಗ್ರಾಮದಲ್ಲಿ ನೂತನವಾಗಿ ಮಂಜೂರಾದ ಕಿತ್ತೂರ ರಾಣಿ ಚೆನ್ನಮ್ಮ ಪ.ವರ್ಗದ ವಸತಿ ಶಾಲೆ ಪ್ರಾರಂಭೋತ್ಸವದ ಉದ್ಘಾಟನೆ ಅಂದು ಮಧ್ಯಾಹ್ನ ೩ ಗಂಟೆಗೆ ಗ್ರಾಮದ ಗ್ರಾಮ ಪಂಚಾಯತಿ ಕಾರ್ಯಾಲಯ ಆವರಣದಲ್ಲಿ ನಡೆಯಲಿದೆ.  ಕಾರ್ಯಕ್ರಮದಲ್ಲಿ ಸಚಿವರುಗಳು, ಶಾಸಕರು, ಜಿ.ಪಂ. ಸದಸ್ಯರುಗಳೊಂದಿಗೆ ಗ್ರಾ.ಪಂ. ಅಧ್ಯಕ್ಷೆ ರೇಣಮ್ಮ ರಾಠೋಡ, ಜಿ.ಪಂ. ಸದಸ್ಯೆ ಹೇಮಲತಾ ಪಾಟೀಲ್, ತಾ.ಪಂ. ಸದಸ್ಯೆ ಶಿವಬಾಯಮ್ಮ ಲಿಂಗಶೆಟ್ಟರ ಮುಂತಾದ ಗಣ್ಯರು, ಉನ್ನತ ಅಧಿಕಾರಿಗಳು ಭಾಗವಹಿಸುವರು ಎಂದು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಪಿ.ಶುಭ  ತಿಳಿಸಿದ್ದಾರೆ.

Leave a Reply