ಉಪಚುನಾವಣೆ : ಮದ್ಯಪಾನ ನಿಷೇಧ ಜಾರಿ

ಕೊಪ್ಪಳ ಸೆ. ೧೯ : ಕೊಪ್ಪಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಮತದಾನ ಹಾಗೂ ಮತಎಣಿಕೆ ದಿನದಂದು ಯಾವುದೇ ಅಹಿತಕರ ಘಟನೆಗಳು ಜರುಗದಂತೆ, ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಪಾಲನೆಗಾಗಿ ಕೊಪ್ಪಳ ಜಿಲ್ಲೆಯಾದ್ಯಂತ ಮದ್ಯಪಾನ ನಿಷೇಧಾಜ್ಞೆಯನ್ನು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಜಾರಿಗೊಳಿಸಿದ್ದಾರೆ.
  ಕೊಪ್ಪಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಿಮಿತ್ಯ ಸೆ. ೨೪ ರ ಬೆಳಿಗ್ಗೆ ೦೬ ಗಂಟೆಯಿಂದ ೨೭ ರಂದು ಬೆಳಿಗ್ಗೆ ೦೬ ಗಂಟೆಯವರೆಗೆ ಹಾಗೂ ಸೆ. ೨೯ ರಂದು ಮತಎಣಿಕೆ ದಿನವಾದ್ದರಿಂದ ಸೆ. ೨೮ ರಂದು ಸಾಯಂಕಾಲ ೬ ಗಂಟೆಯಿಂದ ಸೆ. ೩೦ ರಂದು ಬೆಳಿಗ್ಗೆ ೬ ಗಂಟೆಯವರೆಗೆ ಜಿಲ್ಲೆಯಾದ್ಯಂತ ಎಲ್ಲಾ ವೈನ್‌ಶಾಪ್, ಬಾರ್‌ಗಳು, ಸಗಟು ಮತ್ತು ಚಿಲ್ಲರೆ ಮದ್ಯ ಮಾರಾಟ ಮಾಡುವಂತಿಲ್ಲ.  ಅಲ್ಲದೆ ಈ ಸಂದರ್ಭದಲ್ಲಿ ಮದ್ಯಪಾನವನ್ನು ನಿಷೇಧಿಸಲಾಗಿದೆ.  ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಅಬಕಾರಿ ಉಪ ಆಯುಕ್ತರ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಲಾಗಿದ್ದು, ಆದೇಶವನ್ನು ಜಾರಿಗೆ ತರುವಲ್ಲಿ ನಿರ್ಲಕ್ಷ್ಯತನ ತೋರಿದವರ ವಿರುದ್ಧ ಕಾನೂನು ರಿತ್ಯ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
Please follow and like us:
error