ಸಿದ್ದಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ.

ಕೊಪ್ಪಳ
ಫೆ. ೨೬ (ಕ ವಾ) ಗಂಗಾವತಿ ತಾಲೂಕು ಸಿದ್ದಾಪುರದ (ಜಮಾಪುರ) ಮೊರಾರ್ಜಿ
ದೇಸಾಯಿ ಮಾದರಿ ವಸತಿ ಶಾಲೆಯಲ್ಲಿ ಫೆ. ೨೯ ರಂದು ಬೆಳಿಗ್ಗೆ ೧೧ ಗಂಟೆಗೆ ಮೊರಾರ್ಜಿ
ದೇಸಾಯಿಯವರ ಜನ್ಮ ದಿನಾಚರಣೆ ಹಾಗೂ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ
ಹಮ್ಮಿಕೊಳ್ಳಲಾಗಿದೆ.
     ಈ ಕಾರ್ಯಕ್ರಮಕ್ಕೆ ಇಲ್ಲಿನ ವಸತಿ ಶಾಲೆಯಲ್ಲಿ ಕಾರ್ಯ
ನಿರ್ವಹಿಸಿದ ಬೋಧಕ/ಬೋಧಕೇತರ ಸಿಬ್ಬಂದಿ ಹಾಗೂ ಈ ಶಾಲೆಯಲ್ಲಿ ವ್ಯಾಸಂಗ ಮಾಡಿರುವ ಎಲ್ಲ
ವಿದ್ಯಾರ್ಥಿಗಳು, ಹಳೆಯ ವಿದ್ಯಾರ್ಥಿಗಳು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. 
ಹೆಚ್ಚಿನ ಮಾಹಿತಿಗೆ ಮೊ: ೯೬೧೧೯೮೭೩೨೬ ಕ್ಕೆ ಸಂಪರ್ಕಿಸಬಹುದು ಎಂದು ಪ್ರಾಚಾರ್ಯರು  ಮನವಿ ಮಾಡಿಕೊಂಡಿದ್ದಾರೆ.
Please follow and like us:
error