ನ.೦೮ ರಂದು ಕಲ್ಬುರ್ಗಿ ವಿಭಾಗ ಮಟ್ಟದ ಥ್ರೋಬಾಲ್ ಪಂದ್ಯಾವಳಿ ಉದ್ಘಾಟನೆ

  ಜಿಲ್ಲಾ ಪಂಚಾಯತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನ.೦೮ ರಂದು ಬೆಳಿಗ್ಗೆ ೧೧.೩೦ ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಕಲ್ಬುರ್ಗಿ ವಿಭಾಗ ಮಟ್ಟದ ಪ್ರಾಥಮಿಕ, ಪ್ರೌಢ ಶಾಲಾ ಬಾಲಕ, ಬಾಲಕಿಯರ ಥ್ರೋಬಾಲ್ ಪಂದ್ಯಾವಳಿಗಳ ಉದ್ಘಾಟನೆ ಸಮಾರಂಭ ಜರುಗಲಿದೆ. 
ಕ್ರೀಡಾಕೂಟದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವರಾದ ಶಿವರಾಜ ಎಸ್.ತಂಗಡಗಿ ಅವರು ನೆರವೇರಿಸುವರು. ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ಅಮರೇಶ್ ಕುಳಗಿ, ಸಂಸದ ಸಂಗಣ್ಣ ಕರಡಿ, ಶಾಸಕರುಗಳಾದ ಬಸವರಾಜ ರಾಯರಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ಹಾಲಪ್ಪ ಆಚಾರ್, ಅಮರನಾಥ ಪಾಟೀಲ್, ಶರಣಪ್ಪ ಮಟ್ಟೂರ, ಜಿ.ಪಂ.ಉಪಾಧ್ಯಕ್ಷ ವಿನಯಕುಮಾರ ಮೇಲಿನಮನಿ, ನಗರಸಭೆ ಅಧ್ಯಕ್ಷೆ ಲತಾ ಸಂಡೂರು, ತಾ.ಪಂ. ಅಧ್ಯಕ್ಷೆ ವಿಶಾಲಾಕ್ಷಿ ಮಾಲಿಪಾಟೀಲ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಕೆ.ಅನಿಲಕುಮಾರ, ಜಿಲ್ಲಾಧಿಕಾರಿ ಆರ್.ಆರ್.ಜನ್ನು, ಜಿ.ಪಂ. ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ.ಉದಪುಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಟಿ.ಡಿ.ಪವಾರ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಾಗರಾಜ ಜುಮ್ಮಣ್ಣನವರ, ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವೆಂಕಟೇಶ ಗೌಡರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಭು ಕಿಡದಾಳ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಶಿವಪ್ಪ ಜೋಗಿ, ಪ್ರೌಢ ಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಭುಸ್ವಾಮಿ ಹಿರೇಮಠ, ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಮುರ್ತುಜಾಸಾಬ ಹಿರೇಮನಿ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಟಿ.ರಾಮಕೃಷ್ಣಯ್ಯ ಪಾಲ್ಗೊಳ್ಳುವರು  

Leave a Reply