ಶಿಕ್ಷಕರ ಅರ್ಹತಾ ಪರೀಕ್ಷೆ ಸೆ.೨೩ ರಂದು ಪೂರ್ವಾಭಾವಿ ಸಭೆ.

ಕೊಪ್ಪಳ, ಸೆ.೧೯ (ಕ ವಾ)ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಸೆ. ೨೭ ರಂದು ನಡೆಯಲಿದ್ದು, ಈ ಕುರಿತು ಸಿದ್ಧತೆಗಳನ್ನು ಕೈಗೊಳ್ಳಲು ಪೂರ್ವಭಾವಿ ಸಭೆ ಸೆ. ೨೩ ರಂದು ಸಂಜೆ ೦೪ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
      ಜಿಲ್ಲಾಧಿಕಾರಿಗಳು ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲೆಯ ಕೊಪ್ಪಳ ಮತ್ತು ಗಂಗಾವತಿ ತಾಲೂಕುಗಳಲ್ಲಿ ನಡೆಯಲಿರುವ ಈ ಸಂಯುಕ್ತ ಸ್ಪರ್ಧಾತ್ಮಕ ಪರೀಕ್ಷೆಗಳು, ಮುಂಜಾನೆ ಅವಧಿಯಲ್ಲಿ ೧೩ ಮತ್ತು ಮಧ್ಯಾಹ್ನದ ಅವಧಿಯಲ್ಲಿ ೨೧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

Please follow and like us:
error