ಕನ್ನಡ ಮಾಧ್ಯಮ ಪ್ರಶಸ್ತಿ ಪ್ರಧಾನ ಸಮಾರಂಭ ಮಾ. ೧೫ ಕ್ಕೆ ಮುಂದೂಡಿಕೆ

 ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಕಲಬುರಗಿಯಲ್ಲಿ ಆಯೋಜಿಸಿದ್ದ ವಿಭಾಗ ಮಟ್ಟದ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮಾ. ೧೫ ಕ್ಕೆ ಮುಂದೂಡಲಾಗಿದೆ.
  ಪ್ರಾಧಿಕಾರವು ಕಲಬುರಗಿ ವಿಭಾಗದ ಕನ್ನಡ ಮಾಧ್ಯಮ ಪ್ರಶಸ್ತಿ ಸಮಾರಂಭವನ್ನು ಫೆ. ೨೧ ರಂದು ಬೆಳಿಗ್ಗೆ ೧೦-೩೦ ಗಂಟೆಗೆ ಕಲಬುರಗಿಯ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಆಯೋಜಿಸಲು ದಿನಾಂಕವನ್ನು ನಿಗದಿಪಡಿಸಿತ್ತು.  ಆದರೆ ಆ ಸಂದರ್ಭದಲ್ಲಿ ಪಿಯುಸಿ ಪರೀಕ್ಷೆಗಳು ಪ್ರಾರಂಭಗೊಳ್ಳಲಿರುವುದರಿಂದ, ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮಾ. ೧೫ ಕ್ಕೆ ಮುಂದೂಡಲಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಎಲ್. ಹನುಮಂತಯ್ಯ  ತಿಳಿಸಿದ್ದಾರೆ.
Please follow and like us:
error