You are here
Home > Koppal News > ವಿವೇಕಾನಂದ ಶಾಲೆಯಲ್ಲಿ ಇಂದು ಶಿಕ್ಷಕರ ದಿನಾಚರಣೆ

ವಿವೇಕಾನಂದ ಶಾಲೆಯಲ್ಲಿ ಇಂದು ಶಿಕ್ಷಕರ ದಿನಾಚರಣೆ

ಕೊಪ್ಪಳ, ೦೪: ನಗರದ ಲಯನ್ಸ್ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ನಿಮಿತ್ಯ ಆರ್ಥಪೂರ್ಣ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಮುಂಜಾನೆಯ ಅವಧಿಯಲ್ಲಿ ಶಾಲೆಯ ಶಿಕ್ಷಕರಿಗೆ ಕ್ರೀಡಾ ಮತ್ತು ಮನೋರಂಜನೆ ಹಮ್ಮಿಕೊಳ್ಳಲಾಗಿದ್ದು, ಮಧ್ಯಾಹ್ನದ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ೭ ಜನ ಶಿಕ್ಷಕರನ್ನು ಸನ್ಮಾನಿಸಲಾಗುವುದು. ಲಯನ್ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಣ ಇಲಾಖೆಯ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಶಾಲಾ ಪ್ರಾಚಾರ್ಯ ಎ. ಧನಂಜನಯನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Top