ಕನ್ನಡ ಸಾಹಿತ್ಯ ಪರಿಷತ್ತು ಪರೀಕ್ಷೆ ಫಲಿತಾಂಶ ಪ್ರಕಟ

 : ಕನ್ನಡ ಸಾಹಿತ್ಯ ಪರಿಷತ್ತು ೨೦೧೧-೧೨ ನೇ ಸಾಲಿನಲ್ಲಿ ನಡೆಸಿದ ಕನ್ನಡ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಿದೆ.
  ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಈಗಾಗಲೆ ಫಲಿತಾಂಶವನ್ನು ಕಳುಹಿಸಿಕೊಡಲಾಗಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಅಂತರ್ಜಾಲ  www.kasapa.in ವೆಬ್ ಸೈಟ್‌ನಲ್ಲಿ ಫಲಿತಾಂಶ ಲಭ್ಯವಿದೆ.  ಅಂಕಪಟ್ಟಿ ಹಾಗೂ ಪ್ರಮಾಣಪತ್ರಗಳನ್ನು ಶೀಘ್ರದಲ್ಲಿಯೇ ಎಲ್ಲಾ ಅಭ್ಯರ್ಥಿಗಳಿಗೆ ಕಳುಹಿಸಿಕೊಡಲಾಗುವುದು.  ಮರು ಎಣಿಕೆಗೆ ಅಂಕಪಟ್ಟಿಗಳು ತಲುಪಿದ ಒಂದು ತಿಂಗಳೊಳಗಾಗಿ ಅರ್ಜಿ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗೆ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ದೂರವಾಣಿ- ೨೬೬೨೩೫೮೪ ಕ್ಕೆ ಸಂಪರ್ಕಿಸಬಹುದಾಗಿದೆ  
Please follow and like us:
error