ಕೊಪ್ಪಳ ತಾಲೂಕ ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನೆಗೆ ಚಾಲನೆ

 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ದೈಹಿಕ ಶಿಕ್ಷಕರ ಸಂಘ ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಕೊಪ್ಪಳ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನೆಗೆ ಕೊಪ್ಪಳ ನಗರ ಪೊಲೀಸ್ ಠಾಣೆಯ ಸಬ್ ಇನ್ಸಪೆಕ್ಟರ್ ಆಂಜನೇಯ ಅವರು ಚಾಲನೆ ನೀಡಿದರು. 
ಈ ಕಾರ್ಯಕ್ರಮದ ಕ್ರೀಡಾ ಧ್ವಜಾರೋಹಣವನ್ನು ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಗರಾಜ ಜುಮ್ಮಣ್ಣನವರ ನೆರವೇರಿಸಿದರು. ಅಧ್ಯಕ್ಷತೆಯನ್ನು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವೈ.ಸುದರ್ಶನರಾವ್ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರೌಢ ಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಭುಸ್ವಾಮಿ ಹಿರೇಮಠ, ಜಿಲ್ಲಾ ಪ್ರಾಥಮಿಕ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಮುರ್ತುಸಾಬ, ತಾಲೂಕ ಪ್ರೌಢ ಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರಯ್ಯ ಮುಧೋಳ, ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾ ಅಧಿಕಾರಿ ಎನ್.ಎಸ್.ಪಾಟೀಲ್ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರುಪಣೆಯನ್ನು ದೈಹಿಕ ಶಿಕ್ಷಕರಾದ ಎಂ.ಎಂ. ಮುಜುಗುಂಡ, ಸಂಗಪ್ಪ ಅಂಗಡಿ ಅವರು ನೆರವೇರಿಸಿದರು. ಕೊನೆಯಲ್ಲಿ ದೈಹಿಕ ಶಿಕ್ಷಕ ವೀರಭದ್ರಯ್ಯ ಪೂಜಾರ ವಂದನಾರ್ಪಣೆ ಗೈದರು.
Please follow and like us:
error