fbpx

ಸ್ವಚ್ಛ ಭಾರತ ಅಭಿಯಾನ- ಸಂಪನ್ಮೂಲ ವ್ಯಕ್ತಿಯಾಗಿ ಕೊಪ್ಪಳ ಜಿ.ಪಂ. ಸಿಇಓ ಕೃಷ್ಣ ಉದಪುಡಿ

ಕೊಪ್ಪಳ, ಮಾ.೨೦  : ಕೇಂದ್ರ ಸರ್ಕಾರದ ಕುಡಿಯುವ ನೀರು ಮತ್ತು ನೈರ್ಮಲ್ಯ ಮಂತ್ರಾಲಯವು ದೆಹಲಿಯಲ್ಲಿ ವಿವಿಧ ರಾಜ್ಯಗಳ ಜಿಲ್ಲಾಧಿಕಾರಿಗಳಿಗೆ ಶುಕ್ರವಾರ ಏರ್ಪಡಿಸಿದ ತರಬೇತಿ ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ತರಬೇತಿ ನೀಡಿದರು.
  ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿರುವ ಸ್ವಚ್ಛ ಭಾರತ ಮಿಷನ್ ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲೆ ಅತಿ ಹೆಚ್ಚು ಶೌಚಾಲಯ ನಿರ್ಮಿಸಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಉತ್ತಮ ಸಾಧನೆ 
ತೋರುವ ಮೂಲಕ ಗಮನ ಸೆಳೆದಿದೆ.  ಅಲ್ಲದೆ ಇಡೀ ರಾಜ್ಯದಲ್ಲಿಯೇ  ಬಯಲು ಬಹಿರ್ದೆಸೆ ಮುಕ್ತ ಗ್ರಾಮಗಳು ಜಿಲ್ಲೆಯಿಂದಲೇ ಆಯ್ಕೆಯಾಗಿದ್ದು, ಜಿಲ್ಲೆಯ ಸಾಧನೆ ರಾಷ್ಟ್ರ ಮಟ್ಟದಲ್ಲಿ ಗುರುತಿಸುವಂತಾಗಿದೆ.  ಕೇಂದ್ರ ಸರ್ಕಾರ ೨೦೧೯ ರ ಅಕ್ಟೋಬರ್ ೦೨ ರ ಒಳಗಾಗಿ ಬಯಲು ಬಹಿರ್ದೆಸೆ ಮುಕ್ತ ದೇಶವನ್ನಾಗಿಸುವ ನಿಟ್ಟಿನಲ್ಲಿ ಇಂತಹ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಕೊಪ್ಪಳ ಜಿಲ್ಲಾ ಪಂಚಾಯತಿಯ ಎಲ್ಲ ಸದಸ್ಯರು, ಅಧ್ಯಕ್ಷರು, ಉಪಾಧ್ಯಕ್ಷರು ಜೊತೆಗೆ ಎಲ್ಲ ಅಧಿಕಾರಿಗಳು, ಜನಪ್ರತಿನಿಧಿಗಳು ಈ ಅಭಿಯಾನದ ಯಶಸ್ವಿಗೆ ಸಹಕಾರ ತೋರಿದ್ದು, ಶೌಚಾಲಯ ನಿರ್ಮಾಣದ ಅಭಿಯಾನದಲ್ಲಿ ಜನಜಾಗೃತಿ ಮೂಡಿಸುವಲ್ಲಿ ನಿರತರಾಗಿದ್ದಾರೆ.  ಸಾರ್ವಜನಿಕರ ಮನವೊಲಿಸಿ, ಶೌಚಾಲಯ ನಿರ್ಮಿಸಲು ಪ್ರೇರೇಪಣೆ ನೀಡುವುದು ಜೊತೆಗೆ, ಶೌಚಾಲಯ ಬಳಸುವ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳ ಬಗ್ಗೆ ಹಾಗೂ ಯಶಸ್ವಿಯ ಹಾದಿಯನ್ನು ದೇಶದ ಇತರೆ ಭಾಗಗಳಿಗೂ ತಲುಪಿಸಲು ಅನುಕೂಲವಾಗುವಂತೆ ಕೇಂದ್ರ ಸರ್ಕಾರದ ಕುಡಿಯುವ ನೀರು ಮತ್ತು ನೈರ್ಮಲ್ಯ ಮಂತ್ರಾಲಯವು ದೆಹಲಿಯಲ್ಲಿ ವಿವಿಧ ರಾಜ್ಯಗಳ ಜಿಲ್ಲಾಧಿಕಾರಿಗಳಗೆ ತರಬೇತಿಯನ್ನು ಶುಕ್ರವಾರ ಆಯೋಜಿಸಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯದಿಂದ ಕೊಪ್ಪಳ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ, ರಾಜಸ್ಥಾನದ ಪಾಲಿ ಜಿಲ್ಲೆಯ ಜಿಲ್ಲಾಧಿಕಾರಿ ರೋಹಿತ್ ಗುಪ್ತ ಹಾಗೂ ಛತ್ತೀಸ್‌ಗಢ ರಾಜ್ಯದ ರಾಯಪುರ ಜಿಲ್ಲೆಯ ಆಯುಕ್ತ ಅಶೋಕ್ ಅಗರ್‌ವಾಲ್ ಅವರನ್ನು ಆಯ್ಕೆ ಮಾಡಿದೆ.  ಈ ತರಬೇತಿ ಕಾರ್ಯಕ್ರಮದಲ್ಲಿ ದೇಶದ ವಿವಿಧ ರಾಜ್ಯಗಳ ೩೦ ಕ್ಕೂ ಹೆಚ್ಚು ಜಿಲ್ಲಾಧಿಕಾರಿಗಳು ಪಾಲ್ಗೊಂಡಿದ್ದರು.  
Please follow and like us:
error

Leave a Reply

error: Content is protected !!