ಅಳವಂಡಿ ಪದವಿ ಕಾಲೇಜಿನ ವಿದ್ಯಾರ್ಥಿಗೆ ವೀರಾಗ್ರಣಿ ಪ್ರಶಸ್ತಿ

 : ಕೊಪ್ಪಳ ತಾಲೂಕಿನ ಅಳವಂಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ.ಎ. ಪ್ರಥಮ ವರ್ಷದ ವಿದ್ಯಾರ್ಥಿ ಮಂಜಪ್ಪ ಕೆ.ಪುರದ ಅವರು ನ.೦೬, ೦೭ ರಂದು ಹೊಸಪೇಟೆಯ ವಿಜಯನಗರ ಕಾಲೇಜಿನಲ್ಲಿ ಜರುಗಿದ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಅಂತರ ಮಹಾವಿದ್ಯಾಲಯದ ಪುರುಷರ ೫೦೦೦ ಮೀ., ಹಾಗೂ ೧೦,೦೦೦ ಮೀ. ಓಟ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿ ವೀರಾಗ್ರಣಿ ಪ್ರಶಸ್ತಿ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿ ಮಂಜಪ್ಪ ಕೆ. ಪುರದ ಅವರಿಗೆ, ಕಾಲೇಜು ಅಭಿವೃದ್ದಿ ಸಮಿತಿಯ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ಕಾಲೇಜು ಅಭಿವೃದ್ದಿ ಸಮಿತಿಯ ಎಲ್ಲಾ ಸದಸ್ಯರು, ಮಹಾವಿದ್ಯಾಲಯದ ಪ್ರಾಚಾರ್ಯ ಶಂಭುಲಿಂಗ ಚಿಗರಿ ಹಾಗೂ ಕ್ರೀಡಾ ವಿಭಾಗದ ಉಸ್ತುವಾರಿ ಅಧಿಕಾರಿ ಪ್ರೋ|| ಎಮ್.ಪ್ರಕಾಶ ಅವರು ಅಭಿನಂದನೆ ಸಲ್ಲಿಸಿದ್ದಾರೆ.
Please follow and like us:
error