ಕೇಂದ್ರ ಸಚಿವ ವೀರಪ್ಪ ಮೊಯಿಲಿ ಡಿ. ೨೩ ರಂದು ಕೊಪ್ಪಳಕ್ಕೆ

ಕೊಪ್ಪಳ ಡಿ. ೧೯   ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಸಚಿವ ಡಾ. ಎಂ. ವೀರಪ್ಪ ಮೊಯಿಲಿ ಅವರು ಡಿ. ೨೩ ರಂದು ಒಂದು ದಿನದ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
  ಡಾ. ಎಂ. ವೀರಪ್ಪ ಮೊಯಿಲಿ ಅವರು ಡಿ. ೨೩ ರಂದು ಬೆಳಿಗ್ಗೆ ೧೦ ಗಂಟೆಗೆ ಕೊಪ್ಪಳಕ್ಕೆ ಆಗಮಿಸುವರು, ನಂತರ ಕೊಪ್ಪಳದ ಪ್ರವಾಸಿ ಮಂದಿರದಲ್ಲಿ ಪಕ್ಷದ ಮುಖಂಡರೊಂದಿಗೆ ಸಮಾಲೋಚನೆ ನಡೆಸುವರು, ಮಧ್ಯಾಹ್ನ ೧ ಗಂಟೆಯಿಂದ ೩-೩೦ ರವರೆಗೆ ನಿಯೋಜಿತ ಕಾರ್ಯಕ್ರಮ, ಮಧ್ಯಾಹ್ನ ೩-೩೦ ಗಂಟೆಗೆ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಸಂದರ್ಶನ ನಡೆಸುವರು.  ಕೇಂದ್ರ ಸಚಿವ ವೀರಪ್ಪ ಮೊಯಿಲಿ ಅವರು ಅದೇ ದಿನ ರಾತ್ರಿ ೮ ಗಂಟೆಗೆ ಹಂಪಿ ಎಕ್ಸ್‌ಪ್ರೆಸ್ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.

Leave a Reply