ನ.೧೯ ರಂದು ಜಿಲ್ಲೆಯಲ್ಲಿ ವಿಶ್ವ ಶೌಚಾಲಯ ದಿನಾಚರಣೆ

ವಿಶ್ವ ಶೌಚಾಲಯ ದಿನಾಚರಣೆಯ ಅಂಗವಾಗಿ ಜಿಲ್ಲಾ ಪಂಚಾಯತಿಯಿಂದ  ನ.೧೯ ರಂದು ಜಿಲ್ಲೆಯಾದ್ಯಂತ ವಿಶ್ವ ಶೌಚಾಲಯ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಪ್ರತಿಯೊಂದು ಕುಟುಂಬವು ಕಡ್ಡಾಯವಾಗಿ ಶೌಚಾಲಯವನ್ನು ಹೊಂದಬೇಕೆಂದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ.ಉದಪುಡಿ ಅವರು ತಿಳಿಸಿದ್ದಾರೆ.
ಇಡೀ ವಿಶ್ವದಲ್ಲೇ ವಿಶೇಷವಾಗಿ ಸ್ವಚ್ಚತೆ ಮತ್ತು ಶೌಚಾಲಯಗಳ ಬಗ್ಗೆ ಅರಿವು ಮೂಡಿಸಬೇಕೆಂದು ಕಾರ್ಯಕ್ರಮ ಹಾಕಿಕೊಂಡು ಜನರಲ್ಲಿ ಜಾಗೃತಿ ಮೂಡಿಸಲಾಗುತ್ತದೆ. ಸ್ವಚ್ಚ ಪರಿಸರಕ್ಕಾಗಿ ಮತ್ತು ಎಲ್ಲರ ಆರೋಗ್ಯ ದೃಷ್ಟಿಯಿಂದ ವೈಯಕ್ತಿಕ ಶೌಚಾಲಯಗಳ ನಿರ್ಮಿಸುವುದು ಅವಶ್ಯಕವಾಗಿರುವುದನ್ನು ಮನಗಂಡು ವಿಶ್ವ ಪರಿಸರ ದಿನಾಚರಣೆಯನ್ನು ಪ್ರತಿವರ್ಷದ ನ.೧೯ ರಂದು ಆಚರಿಸಲಾಗುತ್ತಿದೆ. ಇದರ ನಿಮಿತ್ಯವಾಗಿ ಕಳೆದ ೨೦೧೩ ರ ನ.೧೯ ರಂದು ಜಿಲ್ಲೆಯಲ್ಲಿ ರಾಜ್ಯ ಮಟ್ಟದ ವಿಶ್ವ ಶೌಚಾಲಯಗಳ ದಿನಾಚರಣೆಯನ್ನು ಆಚರಿಸಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿದ್ದು ಜಿಲ್ಲೆಯು ರಾಜ್ಯ ಮಟ್ಟದಲ್ಲಿ ಅತೀ ಹೆಚ್ಚಿನ ವೈಯಕ್ತಿಕ ಶೌಚಾಲಯಗಳನ್ನು ನಿರ್ಮಿಸಿ ಇಡೀ ರಾಜ್ಯದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತದೆ. ಜನರ ಸಹಕಾರದಿಂದ ಈ ದಿಸೆಯಲ್ಲಿ ಪ್ರಯತ್ನ ಮಾಡಿ ಪರಿಸರ ನೈರ್ಮಲ್ಯ ಕಾಪಾಡುವ ದೃಷ್ಟಿಯಿಂದ ವಿಶ್ವ ಶೌಚಾಲಯ ದಿನವನ್ನು ಆಚರಿಸಲಾಗುತ್ತಿದೆ.
ಜಿಲ್ಲೆಯಲ್ಲಿ ಕಳೆದ ವರ್ಷದಲ್ಲಿ ಸಾದಿಸಿದ ಗುರಿಗಿಂತ ಹೆಚ್ಚಿನ ಫಲಾನುಭವಿಗಳನ್ನು ಆಯ್ಕೆ ಮಾಡಿಕೊಂಡು ಶೌಚಾಲಯಗಳನ್ನು ನಿರ್ಮಿಸುವ ದಿಸೆಯಲ್ಲಿ ಮನವಿ ಮಾಡಿಕೊಳ್ಳಲಾಗುತ್ತಿದೆ. ಅದಕ್ಕಾಗಿ ಈಗಾಗಲೇ ವಿಶ್ವ ಶೌಚಾಲಯ ದಿನವನ್ನು ಸ್ವಚ್ಚ ಭಾರತ ಮಿಷನ್ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ ರೂ.೧೫,೦೦೦/- ಹಾಗೂ ಇತರೆ ವರ್ಗದ ಫಲಾನುಭವಿಗಳಿಗೆ ರೂ.೧೨,೦೦೦/- ಸರ್ಕಾರದಿಂದ ಸಹಾಯಧನವನ್ನು ನೀಡಲಾಗುತ್ತಿದೆ. ಇದರ ಸದುಪಯೋಗವನ್ನು ಪಡೆದುಕೊಂಡು ಜಿಲ್ಲೆಯನ್ನು ಮುಂದಿನ ವಿಶ್ವ ಶೌಚಾಲಯ ದಿನಾಚರಣೆ ಆಚರಿಸುವ ಮುಂಚಿತವಾಗಿ ಬಯಲುಮುಕ್ತ ಬಹಿರ್ದೆಸೆ ಜಿಲ್ಲೆಯೆಂದು ಘೋಷಣೆ ಮಾಡಲು ಸಾರ್ವಜನಿಕರ ಸಹಕಾರದಿಂದ ಹಾಗೂ ಅವರ ಪ್ರಯತ್ನದಿಂದ ಸಾಧ್ಯವಾಗುತ್ತದೆ. ಈ ಯೋಜನೆಯ ಲಾಭವನ್ನು ಪಡೆದುಕೊಂಡು ಜಿಲ್ಲೆಯಾದ್ಯಂತ ಪ್ರತಿಯೊಬ್ಬರು ವೈಯಕ್ತಿಕ ಶೌಚಾಲಯಗಳನ್ನು ನಿರ್ಮಿಸಿಕೊಂಡು ಸ್ವಚ್ಚ ಭಾರತದ ಕನಸನ್ನು ನನಸಾಗಿಸಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ.ಉದಪುಡಿ ಅವರು ಮನವಿ ಮಾಡಿಕೊಂಡಿದ್ದಾರೆ.

Related posts

Leave a Comment