ಅಕಾಡೆಮಿ ಪುರಸ್ಕಾರ : ಅರ್ಜಿ ಆಹ್ವಾನ

 ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಿಂದ ಪ್ರಸಕ್ತ ಸಾಲಿಗೆ ಶ್ರೇಷ್ಠ ಲೇಖಕ ಪ್ರಶಸ್ತಿಗೆ ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳಲ್ಲಿ ಕನ್ನಡದಲ್ಲಿ ಪುಸ್ತಕಗಳನ್ನು ಪ್ರಕಟಿಸಿರುವ ಲೇಖಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಯ್ಕೆಯಾದ ಲೇಖಕರಿಗೆ ರೂ.೨೫ ಸಾವಿರಗಳ ಪುರಸ್ಕಾರ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುವುದು. ಜನೇವರಿ-೨೦೧೪ ರಿಂದ ಡಿಸೆಂಬರ್-೨೦೧೪ ರೊಳಗೆ ಕನ್ನಡದಲ್ಲಿ ಪ್ರಕಟಗೊಂಡ ಪುಸ್ತಕಗಳನ್ನು ಈ ಪ್ರಶಸ್ತಿಗೆ ಸಲ್ಲಿಸಬಹುದಾಗಿದೆ. ಲೇಖಕರು ನಿಗದಿತ ನಮೂನೆಯ ಅರ್ಜಿಯೊಂದಿಗೆ ಪುಸ್ತಕದ ನಾಲ್ಕು ಪ್ರತಿಗಳನ್ನು ಜನೇವರಿ-೦೫ ೨೦೧೫ ಸಂಜೆ ೫.೩೦ ರೊಳಗೆ ಸದಸ್ಯ ಕಾರ್ಯದರ್ಶಿ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವಿಜ್ಞಾನ ಭವನ, ೨೪/೨, ೨೧ನೇ ಮುಖ್ಯ ರಸ್ತೆ, ಬಿಡಿಎ ಕಾಂಪ್ಲೆಕ್ಸ್ ಹತ್ತಿರ, ಬನಶಂಕರಿ ೨ನೇ ಹಂತ, ಬೆಂಗಳೂರು-೫೬೦೦೭೦ ಇವರಿಗೆ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಇತರೆ ವಿವರಗಳಿಗೆ ಅಕಾಡೆಮಿಯ ವೆಬ್‌ಸೈಟ್ ತಿತಿತಿ.ಞsಣಚಿಛಿಚಿಜemಥಿ.oಡಿg  ಸಂಪರ್ಕಿಸಬಹುದಾಗಿದೆ .
Please follow and like us:
error