ಸೌಲಭ್ಯಗಳ ಸದುಪಯೋಗ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ- ಇಕ್ಬಾಲ್ ಅನ್ಸಾರಿ.

ಕೊಪ್ಪಳ ಸೆ. ೦೨ (ಕ ವಾ) ಗ್ರಾಮೀಣ ಪ್ರದೇಶದವರಿಗೆ ದೊರಕುವ ಸರಕಾರಿ ಸೌಲಭ್ಯಗಳ ಸದುಪೋಗವನ್ನು  ಪ.ಜಾತಿ, ಪ.ಪಂಗಡ ಹಿಂದುಳಿದ, ಅಲ್ಪಸಂಖ್ಯಾತ ವರ್ಗದ ಬಡ ವಿದ್ಯಾರ್ಥಿಗಳು ಪಡೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಶಾಸಕರಾದ ಇಕ್ಬಾಲ್ ಅನ್ಸಾರಿ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.     ಗಂಗಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಿಲಕಮುಖಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸರಕಾರಿ ಮೆಟ್ರಿಕ್ ಪೂರ್ವ ಬಾಲಕರ  ವಸತಿ ನಿಲಯದ ನೂತನ ಕಟ್ಟಡ  ಉದ್ಘಾಟಿಸಿ ಅವರು ಮಾತನಾಡಿದರು.
    ಜಿಲ್ಲೆಯಲ್ಲಿ ಎರಡೂವರೆ ಕೋಟಿ ವೆಚ್ಚದಲ್ಲಿ ಅತ್ಯಂತ ಸುಸಜ್ಜಿತ ವಸತಿ ನಿಲಯ ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ನಿರ್ಮಾಣವಾಗಿರುವುದು ಎಲ್ಲರಿಗೂ ಹೆಮ್ಮೆಯ ವಿಷಯ. ಸುಸಜ್ಜಿತ ಕಟ್ಟಡವನ್ನು ಸ್ವಚ್ಛವಾಗಿಟ್ಟುಕೊಂಡು ಒಳ್ಳೆಯ ರೀತಿಯಲ್ಲಿ ವಿದ್ಯಾಭ್ಯಾಸಗೈದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
      ಹಾಸಗಲ್ ಗ್ರಾ.ಪಂ. ಅಧ್ಯಕ್ಷ ಶರಣಪ್ಪ ಅಧ್ಯಕ್ಷತೆ ವಹಿಸಿದ್ದರು. ಮುಖಂಡರಾದ ಸಂಗಮೇಶ ಬಾದವಾಡಗಿ, ಮಲ್ಲೇಶಪ್ಪ ಗುಮಗೇರಿ, ಗ್ರಾ.ಪಂ. ಸದಸ್ಯ ತುಕಾರಾಂ ಬಡಿಗೇರ್, ಬಸವಕುಮಾರ್, ರಮೇಶ ಪಾಟೀಲ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.  ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಿ. ಕಲ್ಲೇಶ್,  ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಚಿದಾನಂದ, ಗಣ್ಯರಾದ ಎಸ್.ಬಿ. ಖಾದ್ರಿ, ಶ್ಯಾಮೀದ್ ಮನಿಯಾರ್, ನೂರೇಶ್ ಪವಾರ್ ಮುಂತಾದವರು ಉಪಸ್ಥಿತರಿದ್ದರು.

Please follow and like us:
error