ಜಿಲ್ಲೆಯ ಸಹಕಾರ ಸಂಘಗಳಿಗೆ ಚುನಾವಣೆ

ಕೊಪ್ಪಳ : ಕೊಪ್ಪಳ ಜಿಲ್ಲೆಯಲ್ಲಿರುವ ಸಹಕಾರ ಸಂಘಗಳಿಗೆ ಆಡಳಿತ ಮಂಡಳಿ ಹಾಗೂ ಪದಾಧಿಕಾರಿಗಳ ಆಯ್ಕೆ ಸಂಬಂಧ ಚುನಾವಣೆ ಪ್ರಕ್ರಿಯೆ ಪ್ರಾರಂಭಗೊಂಡಿದ್ದು, ಈ ಕುರಿತಂತೆ ರಾಜ್ಯದ ಸಹಕಾರ ಚುನಾವಣೆ ಆಯೋಗ ಅಧಿಸೂಚನೆ ಹೊರಡಿಸಿದೆ.     ಜಿಲ್ಲೆಗೆ ಸಂಬಂಧಿಸಿದಂತೆ ಒಟ್ಟು 153 ಸಹಕಾರ ಸಂಘಗಳಿಗೆ ಚುನಾವಣೆ ಜರುಗಲಿದ್ದು,  ಚುನಾವಣೆ ಪ್ರಕ್ರಿಯೆ ಮಾರ್ಚ್ ತಿಂಗಳವರೆಗೆ ನಡೆಯಲಿದೆ.  ಸಂಘಗಳ ಮುಖ್ಯ ಕಾರ್ಯನಿರ್ವಾಹಕರು ಮತ್ತು ರೀರ್ಟನಿಂಗ್ ಅಧಿಕಾರಿಗಳಿಗೆ ಈಗಾಗಲೆ ತರಬೇತಿ ನೀಡಲಾಗಿದೆ ಎಂದು ಸಹಕಾರ ಸಂಘಗಳ ಉಪನಿಬಂಧಕರು ತಿಳಿಸಿದ್ದಾರೆ.

Leave a Reply