ಕಸಾಪ ಪರೀಕ್ಷೆ ಫಲಿತಾಂಶ ಪ್ರಕಟ

 : ಕನ್ನಡ ಸಾಹಿತ್ಯ ಪರಿಷತ್ತು ೨೦೧೩-೧೪ ನೇ ಸಾಲಿನಲ್ಲಿ ನಡೆಸಿದ ಕನ್ನಡ ಪ್ರವೇಶ,ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಿದೆ.
    ಫಲಿತಾಂಶವು ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಕಟಣಾ ಫಲಕದಲ್ಲಿ ಪ್ರಕಟಿಸಲಾಗಿದೆ.  ಅಲ್ಲದೆ
www.kasapa.in ವೆಬ್‌ತಾಣದಲ್ಲಿ ಪ್ರಕಟಿಸಲಾಗಿದ್ದು, ಅಂಕಪಟ್ಟಿ ಹಾಗೂ ಪ್ರಮಾಣಪತ್ರಗಳನ್ನು ಶೀಘ್ರದಲ್ಲಿಯೇ ಎಲ್ಲ ಅಭ್ಯರ್ಥಿಗಳಿಗೆ ಕಳುಹಿಸಿಕೊಡಲಾಗುವುದು.  ಮರು ಎಣಿಕೆಗೆ ಅಂಕಪಟ್ಟಿಗಳು ತಲುಪಿದ ಒಂದು ತಿಂಗಳ ಒಳಗಾಗಿ ಅರ್ಜಿ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗೆ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು, ದೂರವಾಣಿ ಸಂಖ್ಯೆ: ೦೮೦- ೨೬೬೨೩೫೮೪ ಕ್ಕೆ ಸಂಪರ್ಕಿಸುವಂತೆ  ತಿಳಿಸಿದೆ.

Related posts

Leave a Comment