fbpx

ಕುಷ್ಟಗಿ : ಬಿಸಿಎಂ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

 ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳು, ಕುಷ್ಟಗಿ ಇವರಿಂದ ತಾಲೂಕಿನ ವಿವಿಧ ಶಾಲೆಗಳಲ್ಲಿ ಪ್ರವೇಶ ಪಡೆದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರಸಕ್ತ ಸಾಲಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕುಷ್ಟಗಿ ತಾಲೂಕಿನ ವಿವಿಧ ಶಾಲೆಯಲ್ಲಿ ೫ ರಿಂದ ೧೦ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಹೊಸದಾಗಿ ಹಾಗೂ ನವೀಕರಣಕ್ಕಾಗಿ ಮೆಟ್ರಿಕ ಪೂರ್ವ ವಿದ್ಯಾರ್ಥಿ ಕೇಂದ್ರ ಪುರಸ್ಕೃತ ಅಲೆಮಾರಿ ಅರೆ ಅಲೆಮಾರಿ ವೇತನವನ್ನು ಮಂಜೂರು ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ ವಿದ್ಯಾರ್ಥಿಗಳು ಪ್ರವರ್ಗ-೧, ೨ಎ, ೩ಎ, ೩ಬಿ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ನವೀಕರಣ ಹಾಗೂ ಹೊಸ ಅರ್ಜಿಗಳನ್ನು ಹಿಂದಿನ ಸಾಲಿನ ಅಂಕಪಟ್ಟಿ ಜಾತಿ ಆದಾಯ ಪ್ರಮಾಣ ಪತ್ರಗಳೊಂದಿಗೆ ಜುಲೈ-೩೧ ರೊಳಗಾಗಿ ಸಲ್ಲಿಸಬಹುದು.
ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೩ಎ ಮತ್ತು ೩ಬಿ ಸೇರಿದವರಾಗಿರಬೇಕು, ವಾರ್ಷಿಕ ಆದಾಯ ೪೪೫೦೦ ರೊಳಗೆ ಇರಬೇಕು, ಸರ್ಕಾರದ ಮಾನ್ಯತೆ ಪಡೆದ ಅನುದಾನಿತ/ಅನುದಾನ ರಹಿತ ಶಾಲೆಗಳಲ್ಲಿ, ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಹರು,  ಆದರೆ ಸರ್ಕಾರದ ಅನುದಾನಿತ ವಿದ್ಯಾರ್ಥಿ ನಿಲಯಗಳಲ್ಲಿ/ ವಸತಿ ನಿಲಯಗಳಲ್ಲಿ, ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಹರಿರುವುದಿಲ್ಲ, ಹಿಂದಿನ ತರಗತಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯಲು ಅರ್ಹರಿರುವುದಿಲ್ಲ, ೫ ರಿಂದ ೭ನೇ ತರಗತಿ ವಿದ್ಯಾರ್ಥಿಗಳಿಗೆ ರೂ.೨೫೦/- ೮ ರಿಂದ ೧೦ನೇ ತರಗತಿ ಬಾಲಕರಿಗೆ ರೂ.೫೦೦ ಹಾಗೂ ಬಾಲಕಿಯರಿಗೆ ರೂ.೬೦೦ ಕ್ಕೆ ಹೆಚ್ಚಿಸಲಾಗಿದೆ, ವಿದ್ಯಾರ್ಥಿ ವೇತನ ಮಂಜೂರಾತಿ ಸಲ್ಲಿಸುವ ಪೂರ್ವದಲ್ಲಿ ಈ ಕೆಳಗಿನ ಮಾಹಿತಿ ಹೊಂದಿರಬೇಕು. ಶಾಲೆಯ ಬ್ಯಾಂಕ್ ಖಾತೆ ಸಂಖ್ಯೆ, ರಾಷ್ಟ್ರೀಕೃತ ಬ್ಯಾಂಕಿನ ಹೆಸರು, ಬ್ಯಾಂಕ ಶಾಖೆಯ ಹೆಸರು, ಶಾಲೆಯ ದೂರವಾಣಿ ಸಂಖ್ಯೆ, ವಿದ್ಯಾರ್ಥಿಯ ರಾಷ್ಟ್ರೀಕೃತ ಬ್ಯಾಂಕ್ ಖಾತೆ ಸಂಖ್ಯೆ ಹೊಂದಿರಬೇಕು, ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಾಗಿ ಕುಷ್ಟಗಿ ತಾಲೂಕ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳು ಇವರನ್ನು ಸಂಪರ್ಕಿಸಬಹುದಾಗಿದೆ.
Please follow and like us:
error

Leave a Reply

error: Content is protected !!