ಜೂ.೨೯ ರಂದು ಸಮನ್ವಯ ಸಮಿತಿ ಸಭೆ.

ಕೊಪ್ಪಳ, ಜೂ.೨೫ (ಕರ್ನಾಟಕ ವಾರ್ತೆ) : ಕೊಪ್ಪಳ ಜಿಲ್ಲೆಯಲ್ಲಿ ರೋಗವಾಹಕ ಆಶ್ರಿತ ರೋಗಗಳ ಹರಡುವಿಕೆ ಮತ್ತು ನಿಯಂತ್ರಣ ಕುರಿತಂತೆ ಜಿಲ್ಲೆಯ ಎಲ್ಲಾ ಇಲಾಖೆಗಳ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯನ್ನು ಜೂ.೨೯ ರಂದು ಮಧ್ಯಾಹ್ನ ೦೩ ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಜಿಲ್ಲಾಧಿಕಾರಿ ಆರ್.ಆರ್.ಜನ್ನು ಅವರು ಸಭೆಯ ಅಧ್ಯಕ್ಷತೆ ವಹಿಸುವರು. ಸಭೆಯಲ್ಲಿ ಜಿಲ್ಲೆಯಲ್ಲಿನ ರೋಗವಾಹಕ ಆಶ್ರಿತ ರೋಗಗಳ ಪರಾಮರ್ಷೆ, ಹರಡುವಿಕೆ ಹಾಗೂ ನಿಯಂತ್ರಣಕ್ಕಾಗಿ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಚರ್ಚೆ ಮತ್ತು ಪ್ರಾತ್ಯಕ್ಷಿಕೆ ನಡೆಯಲಿದ್ದು, ಜಿಲ್ಲೆಯ ಎಲ್ಲಾ ಇಲಾಖೆಗಳ ಮುಖ್ಯಸ್ಥರು ಸಭೆಗೆ ಹಾಜರಾಗುವಂತೆ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
Please follow and like us:
error