ಭಕ್ತಿ-ಭಾವದಿಂದ ಸಿದ್ದರಾಮೇಶ್ವರ ಹಾಗೂ ಅಂಬಿಗರ ಚೌಡಯ್ಯ ಜಯಂತಿ ಆಚರಣೆ.

ಕೊಪ್ಪಳ ಜ.
೦೬ (ಕ ವಾ) ಶಿವಯೋಗಿ ಸಿದ್ಧರಾಮೇಶ್ವರರ ಜಯಂತಿ ಆಚರಣೆಯನ್ನು  ಜ. ೧೫
ರಂದು ಹಾಗೂ ನಿಜ ಶರಣ ಅಂಬಿಗರ ಚೌಡಯ್ಯ ನವರ ಜಯಂತಿಯನ್ನು ಜ. ೨೧ ರಂದು ಕೊಪ್ಪಳ ಜಿಲ್ಲಾ
ಕೇಂದ್ರದಲ್ಲಿ ಭಕ್ತಿ-ಭಾವದಿಂದ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ.
ಪ್ರವೀಣಕುಮಾರ ಜಿ.ಎಲ್. ಅವರು ಹೇಳಿದರು. 
       ಶಿವಯೋಗಿ ಸಿದ್ಧರಾಮೇಶ್ವರ
ಜಯಂತಿ ಹಾಗೂ ನಿಜ ಶರಣ ಅಂಬಿಗರ ಚೌಡಯ್ಯ ಅವರ ಆಚರಣೆಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ
ಆಚರಿಸುವ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರದಂದು ಏರ್ಪಡಿಸಲಾಗಿದ್ದ
ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
       ಶಿವಯೋಗಿ
ಸಿದ್ಧರಾಮೇಶ್ವರರ ಜಯಂತಿ ಉತ್ಸವವನ್ನು  ಜ. ೧೫ ರಂದು   ಜಯಂತಿಯನ್ನು ಜಿಲ್ಲೆಯಲ್ಲಿ 
ಆಚರಿಸಲು ಉದ್ದೇಶಿಸಲಾಗಿದೆ.  ಅಂದು ಬೆಳಿಗ್ಗೆ ೯ ಗಂಟೆಗೆ ಶಿವಯೋಗಿ ಸಿದ್ಧರಾಮೇಶ್ವರ
ಅವರ ಭಾವಚಿತ್ರದೊಂದಿಗೆ ಮೆರವಣಿಗೆಯು ನಗರದ ಗವಿಮಠದ ಬಳಿಯಿಂದ ಹೊರಟು, ಶಾರದಾ ಟಾಕೀಸ್
ರಸ್ತೆ, ಗಡಿಯಾರ ಕಂಭ ವೃತ್ತ, ಜವಾಹರ ರಸ್ತೆ, ಅಶೋಕ ಸರ್ಕಲ್ ಮೂಲಕ  ಸಾಹಿತ್ಯ ಭವನ
ತಲುಪಲಿದೆ.  ಬೆಳಿಗ್ಗೆ ೧೧-೩೦ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಸಮಾರಂಭ ಜರುಗಲಿದೆ. 

      ನಿಜ ಶರಣ ಅಂಬಿಗರ ಚೌಡಯ್ಯ ಅವರ ಜಯಂತಿಯನ್ನು ಜ. ೨೧ ರಂದು ಕೊಪ್ಪಳದಲ್ಲಿ
ಭಕ್ತಿಭಾವದಿಂದ ಆಚರಿಸಲಾಗುವುದು.  ಅಂದು ಬೆಳಿಗ್ಗೆ ೯ ಗಂಟೆಗೆ ಅಂಬಿಗರ ಚೌಡಯ್ಯನವರ
ಭಾವಚಿತ್ರದೊಂದಿಗೆ ಮೆರವಣಿಗೆಯು ನಗರದ ಸಿರಸಪ್ಪಯ್ಯನವರ ಮಠ ಆವರಣದಿಂದ ಹೊರಟು, ಗಡಿಯಾರ
ಕಂಭ, ಜವಾಹರ ರಸ್ತೆ, ಅಶೋಕ ಸರ್ಕಲ್ ಮೂಲಕ ಸಾಹಿತ್ಯ ಭವನದವರೆಗೆ ಸಾಗಿ ಬರಲಿದೆ.  ಅಂದು
ಬೆಳಿಗ್ಗೆ ೧೧-೩೦ ಗಂಟೆಗೆ ಸಾಹಿತ್ಯ ಭವನದಲ್ಲಿ ವೇದಿಕೆ ಸಮಾರಂಭ ಜರುಗಲಿದೆ. 
    
ಉಭಯ ಮಹನೀಯರ ಜಯಂತಿ ಆಚರಣೆ ಅಂಗವಾಗಿ ಸಮಾರಂಭದಲ್ಲಿ ವಿಶೇಷ ಉಪನ್ಯಾಸ, ಪ್ರತಿಭಾವಂತ
ವಿದ್ಯಾರ್ಥಿಗಳಿಗೆ ಸನ್ಮಾನ ನಡೆಯಲಿದೆ. ಜಯಂತಿ ಆಚರಣೆಯಲ್ಲಿ ಎಲ್ಲ ಸಾರ್ವಜನಿಕರು,
ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳು, ಎಲ್ಲ ಸಮಾಜದ ಮುಖಂಡರು ಸಕ್ರಿಯವಾಗಿ ಪಾಲ್ಗೊಂಡು
ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು.  ಮೆರವಣಿಗೆ ಹಾಗೂ ಸಮಾರಂಭದಲ್ಲಿ ಎಲ್ಲ
ಅಧಿಕಾರಿ, ಸಿಬ್ಬಂದಿಗಳು ಪಾಲ್ಗೊಳ್ಳಬೇಕು.   ಮೆರವಣಿಗೆ ಸಂದರ್ಭದಲ್ಲಿ ಸೂಕ್ತ ಪೊಲೀಸ್
ಬಂದೋಬಸ್ತ್, ಅಗತ್ಯ ಕುಡಿಯುವ ನೀರಿನ ವ್ಯವಸ್ಥೆ, ಮೆರವಣಿಗೆ ಸಾಗಿ ಬರುವ ರಸ್ತೆಯನ್ನು
ಸ್ವಚ್ಛಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.
ಪ್ರವೀಣಕುಮಾರ್ ಅವರು ಹೇಳಿದರು.
        ಸಭೆಯಲ್ಲಿ ನಗರಸಭೆ ಉಪಾಧ್ಯಕ್ಷ ಬಾಳಪ್ಪ
ಬಾರಕೇರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಟಿ. ಕೊಟ್ರಪ್ಪ, ದೈಹಿಕ
ಶಿಕ್ಷಣ ಅಧೀಕ್ಷಕ ಸುದರ್ಶನ್ ಸೇರಿದಂತೆ  ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ
ಅಧಿಕಾರಿಗಳು,  ಸಮಾಜದ ಮುಖಂಡರಾದ ಬಸವರಾಜ ಬೋವಿ, ಸತ್ಯಪ್ಪ,  ಡಾ. ಜ್ಞಾನಸುಂದರ್,
ಶಿವಾನಂದ ಹೊದ್ಲೂರು, ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿ ಉಪಯುಕ್ತ
ಸಲಹೆ ಸೂಚನೆ ನೀಡಿದರು..

Please follow and like us:
error