fbpx

ಏ. ೦೫ ರಂದು ಡಾ. ಬಾಬು ಜಗಜೀವನರಾಮ್ ಜನ್ಮ ದಿನಾಚರಣೆ : ಸರಳ ಆಚರಣೆ

 ಲೋಕಸಭೆ ಚುನಾವಣೆ ಇರುವ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಏ.೦೫ ರಂದು  ಹಸಿರು ಕ್ರಾಂತಿಯ ಹರಿಕಾರ ಡಾ|| ಬಾಬು ಜಗಜೀವನರಾಮ್‌ರವರ ೧೦೭ನೇ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್‌ನಲ್ಲಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವುದರ ಮೂಲಕ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್ ಅವರು ತಿಳಿಸಿದ್ದಾರೆ.
  ಏ. ೫ ರಂದು ಬೆಳಿಗ್ಗೆ  ೯ ಗಂಟೆಗೆ ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್‌ನಲ್ಲಿ ಡಾ. ಬಾಬು ಜಗಜೀವನರಾಂ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿ ಸರಳ, ಸಾಂಕೇತಿಕವಾಗಿ ಆಚರಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ತಪ್ಪದೆ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್  ತಿಳಿಸಿದ್ದಾರೆ
Please follow and like us:
error

Leave a Reply

error: Content is protected !!