ತೋಟಗಾರಿಕೆಯಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿ ಶಿಬಿರ ಅರ್ಜಿ ಆಹ್ವಾನ.

ಕೊಪ್ಪಳ, ಜು.೨೪ತೋಟಗಾರಿಕೆ ಇಲಾಖೆ ವತಿಯಿಂದ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಕೊಪ್ಪಳ ಜಿಲ್ಲೆಯ ರೈತಮಕ್ಕಳಿಗೆ ಒಂದು ತಿಂಗಳ ತೋಟಗಾರಿಕೆಯಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿ ಶಿಬಿರವನ್ನು ಬಾಗಲಕೋಟೆ ಜಿಲ್ಲೆಯ ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದು, ಆಸಕ್ತ ರೈತ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.
     ತರಬೇತಿ ಶಿಬಿರವು ಆಗಸ್ಟ್ ೦೧ ರಿಂದ ಆಗಸ್ಟ್ ೩೧ ರವರೆಗೆ ಒಂದು ತಿಂಗಳ ಕಾಲ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಊಟ ಮತ್ತು ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಅರ್ಜಿ ಸಲ್ಲಿಸಲಿಚ್ಛಿಸುವ ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಕನ್ನಡ ಮಾಧ್ಯಮದಲ್ಲಿ ಪಾಸಾಗಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳು ೧೮ ರಿಂದ ೩೩ ವರ್ಷದೊಳಗಿನ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳು ೧೮ ರಿಂದ ೩೫ ವರ್ಷದೊಳಗಿನ ವಯೋಮಿತಿಯಲ್ಲಿರಬೇಕು. ನಿಗದಿತ ಅರ್ಜಿ ನಮೂನೆಗಳನ್ನು  ತೋಟಗಾರಿಕಾ ಉಪನಿರ್ದೇಶಕರ ಕಛೇರಿ, ಕೊಪ್ಪಳದಲ್ಲಿ ಜು.೨೨ ರಿಂದ ೨೭ ರವರೆಗೆ ಉಚಿತವಾಗಿ ಪಡೆಯಬಹುದಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಜು.೨೭ ಕೊನೆಯ ದಿನಾಂಕವಾಗಿದ್ದು, ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳು ಮೂಲ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಜಮೀನು ಹೊಂದಿರುವ ಬಗ್ಗೆ ಪಹಣಿ ಮತ್ತು ಗ್ರಾಮ ಲೆಕ್ಕಾಧಿಕಾರಿಗಳಿಂದ ವಂಶವೃಕ್ಷ ದೃಢೀಕರಣ ಇತ್ಯಾದಿ ದಾಖಲಾತಿಗಳೊಂದಿಗೆ ಜು.೨೯ ರಂದು ಮುಂಜಾನೆ ೧೧ ಗಂಟೆಗೆ ಕೊಪ್ಪಳದ ತೋಟಗಾರಿಕೆ ಉಪನಿರ್ದೇಶಕರ ಕಛೇರಿಯಲ್ಲಿ ಜರುಗುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ತಿಳಿಸಿದೆ.  
Please follow and like us:
error

Related posts

Leave a Comment