ಗುಳೇ ಹೋಗಬೇಡಿ. ಉದ್ಯೋಗ ಖಾತ್ರಿಯಡಿ ಕೆಲಸ ಪಡೆಯಿರಿ ಕೃಷ್ಣ ಉದಪುಡಿ ಮನವಿ.

ಕೊಪ್ಪಳ, ಅ.೨೯ (ಕ ವಾ) ಕೊಪ್ಪಳ ಜಿಲ್ಲೆಯ ಗ್ರಾಮಸ್ಥರು ಉದ್ಯೋಗಕ್ಕಾಗಿ ಗುಳೆ ಹೋಗಬೇಡಿ. ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಸ್ಥಳೀಯವಾಗಿ ಕೆಲಸ ಮಾಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ.ಉದಪುಡಿ ಗ್ರಾಮಸ್ಥರಲ್ಲಿ ಮನವಿ ಮಾಡಿದ್ದಾರೆ.
     ಪ್ರಸಕ್ತ ಸಾಲಿನ ಪ್ರಾರಂಭದಲ್ಲಿ ಮಳೆಯ ಅಭಾವ ಕಂಡು ಬಂದಿರುವುದರಿಂದ ಜಿಲ್ಲೆಯಲ್ಲಿ ಬರಗಾಲ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಕೆಲಸ ಅರಸಿ ಬೇರೆ ರಾಜ್ಯ ಅಥವಾ ಜಿಲ್ಲೆಗಳಿಗೆ ಗುಳೆ ಹೊರಡುವ ಗ್ರಾಮೀಣ ಭಾಗದ ಕೂಲಿಕಾರರು, ಸಾಮಾಜಿಕ, ಶೈಕ್ಷಣಿಕ ಹಾಗೂ ಆರೋಗ್ಯದ ದೃಷ್ಟಿಯಿಂದ ತೊಂದರೆಯನ್ನು ಎದುರಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಗ್ರಾಮಸ್ಥರು ಗುಳೆ ಹೋಗದೇ, ತಮ್ಮ ಊರಿನಲ್ಲಿಯೇ ಸ್ವ ಇಚ್ಛೆಯಿಂದ ಕೂಲಿ ಬೇಡಿಕೆ ಸಲ್ಲಿಸಿದಲ್ಲಿ ತುರ್ತಾಗಿ ಸಮುದಾಯಾಧಾರಿತ ಕಾಮಗಾರಿಗಳು ಅಲ್ಲದೆ, ನಮ್ಮ ಹೊಲ-ನಮ್ಮ ದಾರಿ ಇತ್ಯಾದಿ  ಕಾಮಗಾರಿಗಳನ್ನು ಹಾಗೂ ವೈಯಕ್ತಿಕ ಕಾಮಗಾರಿಗಳಾದ ಕುರಿ ಅಥವಾ ದನದ ದೊಡ್ಡಿ ಕಾಮಗಾರಿಗಳು, ಜೊತೆಗೆ ತಮ್ಮ ಜಮೀನಿನಲ್ಲಿರುವ ತೋಟಗಾರಿಕೆ ಕಾಮಗಾರಿಗಳಾದ ಗಿಡ, ತೋಟಗಾರಿಕೆ, ಭೂಮಿಯ ಫಲವತ್ತತೆ, ಕೆರೆ, ಕುಂಟೆ ನಿರ್ಮಿಸಿಕೊಳ್ಳಲು ಪ್ರತಿ ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ ೧೦೦ ದಿನ ಪೂರ್ತಿ ಕೆಲಸ ಕೊಡಲು ವ್ಯವಸ್ಥೆ ಮಾಡಲಾಗುತ್ತದೆ.
     ಜಿಲ್ಲೆಯ ಗ್ರಾಮೀಣ ಭಾಗದ ಕೂಲಿಕಾರರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಪ್ರತಿ ಕುಟುಂಬಕ್ಕೆ ೧೦೦ ದಿನಗಳ ಉದ್ಯೋಗವನ್ನು ನೀಡಿ, ಗುಳೆ ಹೋಗುವುದನ್ನು ತಡೆಗಟ್ಟಿ, ಗ್ರಾಮಸ್ಥರಲ್ಲಿ ಗುಳೇ ಹೋಗದಂತೆ ನೈತಿಕ ಮನೋಸ್ಥೈರ್ಯ ತುಂಬಲು ಸಿದ್ಧರಾಗಿರುವಂತೆ ಹಾಗೂ ಸ್ವ ಇಚ್ಛೆಯಿಂದ ಅರ್ಜಿ ಸಲ್ಲಿಸಿದ ಎಲ್ಲಾ ಕೂಲಿಕಾರರಿಗೆ ತುರ್ತಾಗಿ ಕೆಲಸ ನೀಡುವಂತೆ, ದೃತಿಗೆಡದೆ ಪೂರ್ವಾಭಾವಿ ಸಿದ್ಧತೆ ನಡೆಸಿ, ತಕ್ಷಣದಿಂದಲೇ ಕ್ರಮ ಕೈಗೊಳ್ಳುವಂತೆ ಪಿಡಿಓಗಳಿಗೆ ಈಗಾಗಲೆ ಸೂಚನೆ ನೀಡಲಾಗಿದೆ. ಎಲ್ಲ ಗ್ರಾಮೀಣರಿಗೂ ಸುಲಭವಾಗಿ ಕೆಲಸ ಸಿಗುವಂತೆ ಮಾಡಲು ಗ್ರಾಮೀಣ ಮಟ್ಟದಲ್ಲಿ ಆಂದೋಲನ ರೂಪದಲ್ಲಿ ಅನುಷ್ಠಾನಗೊಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.  ಎಲ್ಲಾ ಸಾರ್ವನಿಕರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವುದರ ಜೊತೆಗೆ ವೈಯಕ್ತಿಕ ಶೌಚಾಲಯದ ಸುತ್ತ ತೆಂಗಿನ ಮರ, ನಿಂಬೆ ಗಿಡ ಇತ್ಯಾದಿ ಗಿಡಗಳನ್ನು ನೆಟ್ಟು ಒಳ್ಳೆಯ ಪರಿಸರವನ್ನು ನಿರ್ಮಾಣ ಮಾಡಬೇಕು ಎಂದು ಮನವಿ ಮಾಡಿಕೊಳ್ಳಲಾಗಿದೆ.
     ಗ್ರಾಮ ಪಂಚಾಯಿತಿಗಳಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕೆಲಸ ನೀಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದರೆ, ಕೂಡಲೇ ಜಿಲ್ಲಾ ಕಛೇರಿಯ ಸಹಾಯವಾಣಿ ದೂರವಾಣಿ ಸಂಖ್ಯೆ : ೦೮೫೩೯-೨೨೦೧೭೪ ನ್ನು ಹಾಗೂ ಮೊಬೈಲ್ : ೯೪೮೨೦೩೦೯೩೮ ನ್ನು ಬೆಳಿಗ್ಗೆ ೧೦ ರಿಂದ ಸಂಜೆ ೫.೩೦ ಗಂಟೆಯವರೆಗೆ ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ  ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್, ಕೊಪ್ಪಳ ಇವರ ದೂರವಾಣಿ ಸಂಖ್ಯೆ : ೯೪೮೦೮೭೧೦೦೦ ಗೆ ಮೆಸೇಜ್ ಮೂಲಕ ತಮ್ಮ ಗ್ರಾಮದ ಕೆಲಸದ ಬಗ್ಗೆ ನಮೂದಿಸಿ, ಕಳುಹಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ.ಉದಪುಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ.೦೪ ರಂದು ಕೊಪ್ಪಳ ಜಿ.ಪಂ. ಸಾಮಾನ್ಯ ಸಭೆ.
ಕೊಪ್ಪಳ, ಅ.೩೦ (ಕ ವಾ) ಕೊಪ್ಪಳ ಜಿಲ್ಲಾ ಪಂಚಾಯತಿ ಸಾಮಾನ್ಯ ಸಭೆ ನ. ೦೪ ರಂದು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆಯಲಿದೆ.
     ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತಿ ಅಧ್ಯಕ್ಷ ಅಮರೇಶ್ ಕುಳಗಿ ಅವರು ವಹಿಸುವರು.  ಸಭೆಯಲ್ಲಿ ಪ್ರಸಕ್ತ ಸಾಲಿನ ವಿವಿಧ ಯೋಜನೆಗಳ ಅನುಷ್ಠಾನ ವಿವರ, ಕುಡಿಯುವ ನೀರಿನ ಯೋಜನೆಗಳು, ಉದ್ಯೋಗ ಖಾತ್ರಿ ಕಾಮಗಾರಿಗಳ ಕ್ರಿಯಾ ಯೋಜನೆ ಹಾಗೂ ಅನುಷ್ಠಾನ, ಶಿಕ್ಷಣ ಇಲಾಖೆಯ ಸರ್ಕಾರಿ ಶಾಲೆಗಳಿಗೆ ಭೂದಾನ ನೀಡಿರುವ ಪ್ರಕರಣಗಳು, ವಯಕ್ತಿಕ ಶೌಚಾಲಯ ನಿರ್ಮಾಣ ಪ್ರಗತಿ, ಕಸ ವಿಲೇವಾರಿ ಸೇರಿದಂತೆ ವಿವಿಧ ಇಲಾಖೆಗಳ ಮೂಲಕ ಅನುಷ್ಠಾನಗೊಳ್ಳುವ ಯೋಜನೆಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಯಲಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ ಅವರು ತಿಳಿಸಿದ್ದಾರೆ.
ಯಲಬುರ್ಗಾ ಆಸ್ತಿ ತೆರಿಗೆ ಪಾವತಿ ಚಲನ್ ಸಲ್ಲಿಸಲು ಸೂಚನೆ.
ಕೊಪ್ಪಳ, ಅ.೨೯ (ಕ ವಾ) ಕೊಪ್ಪಳ ಜಿಲ್ಲೆಯ ಯಲಬುರ್ಗಾ ಪಟ್ಟಣ ಪಂ
     ಸರ್ಕಾರದಿಂದ ನಗರ ಸ್ಥಳೀಯ ಸಂಸ್ಥೆಗಳಿಗೆ ಭೌಗೋಳಿಕ ಮಾಹಿತಿ ಆಧಾರಿತ ಆಸ್ತಿ ತೆರಿಗೆ ಪದ್ಧತಿ ಅಳವಡಿಸಲಾಗಿರುವುದರಿಂದ, ಆಸ್ತಿಗಳ ಮಾಲೀಕರು ೨೦೦೨-೦೩ ರಿಂದ ಪ್ರಸಕ್ತ ಸಾಲಿನವರೆಗೆ ಸ್ವಯಂ ಘೋಷಿತ ಆಸ್ತಿ ತೆರಿಗೆಯನ್ನು ಪಾವತಿಸಿರುವ ವಿವರಣಾ ಪಟ್ಟಿ ಹಾಗೂ ಚಲನ್ ಪ್ರತಿಗಳನ್ನು ಅ.೩೧ ರೊಳಗಾಗಿ ಯಲಬುರ್ಗಾ ಪಟ್ಟಣ ಪಂಚಾಯತ್ ಕಾರ್ಯಾಲಯಕ್ಕೆ ಸಲ್ಲಿಸಿ, ಸ್ವೀಕೃತಿ ಪಡೆಯುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯದ ಕಂದಾಯ ವಿಭಾಗವನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಕಾರ್ಯಾಲಯದ ಮುಖ್ಯಾಧಿಕಾರಿ ನಾಗೇಶ ತಿಳಿಸಿದ್ದಾರೆ.

ಚಾಯತ್ ಕಾರ್ಯಾಲಯದ ವ್ಯಾಪ್ತಿಯಲ್ಲಿರುವ ಆಸ್ತಿ ತೆರಿಗೆದಾರರು ಸ್ವಯಂ ಘೋಷಿತ ಆಸ್ತಿ ತೆರಿಗೆ ಪಾವತಿ ಮಾಡಿದ ಚಲನ್ ಪ್ರತಿಗಳನ್ನು ಅ.೩೧ ರೊಳಗಾಗಿ ಪಟ್ಟಣ ಪಂಚಾಯತ್ ಕಾರ್ಯಾಲಯಕ್ಕೆ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.

Please follow and like us:
error