ಯಲಬುರ್ಗಾ : ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ

 

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಯಲಬುರ್ಗಾ ತಾಲೂಕು ಆಡಳಿತ, ತಾಲೂಕಾ ಪಂಚಾಯತಿ ವತಿಯಿಂದ ತಹಸಿಲ್ದಾರರ ಕಚೇರಿಯಲ್ಲಿ ಸರಳವಾಗಿ ಆಚರಿಸಲಾಯಿತು.

  ಚುನಾವಣೆ ನೀತಿ ಸಂಹಿತೆಯ ಕಾರಣ ಅಂಬೇಡ್ಕರ್ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.  ಯಲಬುರ್ಗಾ ತಹಸಿಲ್ದಾರ್ ಮಡಿವಾಳರ್ ಅವರು ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.  ಯಲಬುರ್ಗಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಜಂಟಿಕೃಷಿ ನಿರ್ದೇಶಕ ಪದ್ಮಯ್ಯ ನಾಯಕ್, ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜಯ್ಯ ಸೇರಿದಂತೆ ವಿವಿಧ ಅಧಿಕಾರಿ, ಸಿಬ್ಬಂದಿಗಳು ಈ ಸಂದರ್ಭದಲ್ಲಿ ಭಾಗವಹಿಸಿ ಅಂಬೇಡ್ಕರ್ ಅವರಿಗೆ ಪುಷ್ಪ ನಮನ ಸಲ್ಲಿಸಿದರು.
Please follow and like us:

Leave a Reply