You are here
Home > Koppal News > ಏ.೫ ರಂದು ಡಾ||ಬಾಬು ಜಗಜೀವನರಾಂ ಹಾಗೂ ದಲಿತ ವಚನಕಾರರ ಜಯಂತಿ

ಏ.೫ ರಂದು ಡಾ||ಬಾಬು ಜಗಜೀವನರಾಂ ಹಾಗೂ ದಲಿತ ವಚನಕಾರರ ಜಯಂತಿ

ಕೊಪ್ಪಳ, ಏ.೦೪ : ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಏ.೦೫ ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಡಾ|| ಬಾಬು ಜಗಜೀವನರಾಂ ಹಾಗೂ ದಲಿತ ವಚನಕಾರರ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿದೆ. 
  ಸಣ್ಣ ನೀರಾವರಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್.ತಂಗಡಗಿ ಕಾರ್ಯಕ್ರಮ ಉದ್ಘಾಟಿಸುವರು. ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷ ಅಮರೇಶ ಕುಳಗಿ, ಸಂಸದ ಸಂಗಣ್ಣ ಕರಡಿ,   ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ಹಾಲಪ್ಪ ಆಚಾರ್, ಶರಣಪ್ಪ ಮಟ್ಟೂರ್, ಅಮರನಾಥ ಪಾಟೀಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೈಯ್ಯದ್ ಜುಲ್ಲು ಖಾದರ್ ಖಾದ್ರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಕೆ. ಅನಿಲ್‌ಕುಮಾರ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ವಿನಯಕುಮಾರ ಮೇಲಿನಮನಿ, ನಗರಸಭೆ ಅಧ್ಯಕ್ಷೆ ಬಸಮ್ಮ ಹಳ್ಳಿಗುಡಿ, ತಾಲೂಕಾ ಪಂಚಾಯತ್ ಅಧ್ಯಕ್ಷೆ ವಿಶಾಲಾಕ್ಷಿ ವಿ.ಮಾಲಿಪಾಟೀಲ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
  ಹೊಸಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಇಂಗ್ಲೀಷ್ ಪ್ರಾಧ್ಯಾಪಕ ಟಿ.ಹೆಚ್. ಬಸವರಾಜ್ ಅವರು ದಲಿತ ವಚನಕಾರರ ಕುರಿತು ಹಾಗೂ ಕನ್ನಡ ಹಂಪಿ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಪ್ರೊ. ಹೆಚ್. ಲಿಂಗಪ್ಪ ಅವರು ಡಾ|| ಬಾಬು ಜಗಜೀವನರಾಂ ಕುರಿತು ವಿಶೇಷ ಉಪನ್ಯಾಸ ನೀಡುವರು.  ಇದಕ್ಕೂ ಮುನ್ನ ಅಂದು ಬೆಳಿಗ್ಗೆ ೭.೩೦ ಗಂಟೆಗೆ ನಗರದ ತಹಶೀಲ್ದಾರ ಕಛೇರಿಯಿಂದ ಮಹನಿಯರ ಭಾವಚಿತ್ರದ ಮೆರವಣಿಗೆ ಆರಂಭಗೊಳ್ಳಲಿದ್ದು, ಡಾ|| ಬಾಬು ಜಗಜೀವನರಾಂ ವೃತ್ತ ಮಾರ್ಗವಾಗಿ ಜವಾಹರ ರಸ್ತೆ ಮೂಲಕ ಸಾಹಿತ್ಯ ಭವನ ತಲುಪಲಿದೆ.  ಕಾರ್ಯಕ್ರಮ

Leave a Reply

Top