ಕೊಪ್ಪಳ ಕಾಂಗ್ರೆಸ್ ಚುನಾವಣಾ ಪ್ರಚಾರಸಭೆ.

ಕೊಪ್ಪಳ,೧೨, ರಾಯಚೂರು-ಕೊಪ್ಪಳ ವಿಧಾನಪರಿಷತ್ ಚುನಾವಣೆಯ ಪ್ರಚಾರಸಭೆಯು ದಿನಾಂಕ ೧೫ ರಂದು ಬೆಳೆಗ್ಗೆ ೧೦ ಘಂಟೆಗೆ ನಗರದ ಹೊಸಪೇಟೆ ರಸ್ತೆಯಲ್ಲಿರುವ ಶಿವಶಾಂತ ಮಂಗಲಭವನದಲ್ಲಿ ನಡೆಯಲಿದ್ದು, ಈ ಸಭೆಗೆ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಸನ್ಮಾನ್ಯ ಶ್ರೀ ಹೆಚ್.ಕೆ.ಪಾಟೀಲರವರು ಆಗಮಿಸಲಿದ್ದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀ ಬಸವರಾಜ ಪಾಟೀಲ ಇಟಗಿಯವರ ಪರವಾಗಿ ಮತ ಯಾಚನೆ ಮಾಡಲಿದ್ದಾರೆ. ಈ ಸಭೆಗೆ  ಕೊಪ್ಪಳ ಜಿಲ್ಲೆಯ ಸಚಿವರು, ಶಾಸಕರು, ಚುನಾಯಿತ ಪ್ರತಿನಿಧಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮಾಜಿ ಸಚಿವರು, ಸಂಸದರು, ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಹಾಗೂ ಅಕ್ಬರಪಾಷಾ ಪಲ್ಟನ ಪತ್ರಿಕಾ ತಿಳಿಸಿರುತ್ತಾರೆ.
Please follow and like us:
error