fbpx

ಬರ ಪರಿಸ್ಥಿತಿ ನಿರ್ವಹಣೆಗೆ ಸಿದ್ಧತೆ ಕೈಗೊಳ್ಳಿ- ಟಿ.ಕೆ. ಅನಿಲಕುಮಾರ್ ಸೂಚನೆ.

ಕೊಪ್ಪಳ – ಆ. ೧೦ ಕೊಪ್ಪಳ ಜಿಲ್ಲೆಯಲ್ಲಿ ಮುಂಗಾರು ಮಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ಬರಪರಿಸ್ಥಿತಿ ತಲೆದೋರಿದ್ದು, ಕುಡಿಯುವ ನೀರು ಸರಬರಾಜು, ಜಾನುವಾರುಗಳಿಗೆ ಮೇವು ಪೂರೈಕೆ, ಪರ್ಯಾಯ ಕೃಷಿ ಚಟುವಟಿಕೆ ಹಾಗೂ ಉದ್ಯೋಖಾತ್ರಿ ಯೋಜನೆ ಸಂಬಂಧಿಸಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ರಾಜ್ಯ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಟಿ.ಕೆ. ಅನಿಲಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯಲ್ಲಿನ ಬರ ಪರಿಸ್ಥಿತಿಯ ಪರಾಮರ್ಶೆ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರದಂದು ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಈ ವರ್ಷ ಜನವರಿಯಿಂದ ಏಪ್ರಿಲ್ ವರೆಗೆ ೨೬. ೮೦ ಮಿ.ಮೀ. ವಾಡಿಕೆ ಮಳೆಯ ಬದಲಿಗೆ ೮೭. ೪೦ ಮಿ.ಮೀ. ಹೆಚ್ಚು ಮಳೆಯಾಗಿದೆ.  ಆದರೆ ಕೃಷಿ ಚಟುವಟಿಕೆ ಚುರುಕುಗೊಳ್ಳುವ ಮೇ ತಿಂಗಳಿನಿಂದ ಜುಲೈ ತಿಂಗಳಿನವರೆಗೆ ೨೦೫. ೫೦ ಮಿ.ಮೀ. ವಾಡಿಕೆ ಮಳೆಯ ಬದಲಿಗೆ ಕೇವಲ ೧೦೮. ೧೦ ಮಿ.ಮೀ. ಮಳೆಯಾಗಿದ್ದು ಶೇ. ೪೭ ರಷ್ಟು ಕೊರತೆ ಕಂಡುಬಂದಿದೆ.  ಜುಲೈ ತಿಂಗಳು ಒಂದರಲ್ಲೇ ಶೇ. ೮೦ ರಷ್ಟು ಮಳೆಯ ಕೊರತೆಯಾಗಿದೆ.  ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ೨೫೨೫೦೦ ಹೆ. ಪ್ರದೇಶದಲ್ಲಿ ಬಿತ್ತನೆ ಗುರಿಯ ಬದಲಿಗೆ ೧೩೦೮೪೭ ಹೆ., ಅಂದರೆ ಶೇ. ೫೨ ರಷ್ಟು ಮಾತ್ರ ಬಿತ್ತನೆಯಾಗಿದೆ.  ಇದರಲ್ಲಿ ೯೦೮೦೮ ಹೆ. ಮಳೆಯಾಶ್ರಿತ ಪ್ರದೇಶದಲ್ಲಿ ಬಿತ್ತನೆಯಾಗಿದೆ.  ಮಳೆಯ ಕೊರತೆಯಿಂದಾಗಿ ಬಿತ್ತನೆಯಾಗಿರುವ ಬೆಳೆಗಳೂ ಸಹ ಬಾಡುತ್ತಿವೆ.  ಈ ನಿಟ್ಟಿನಲ್ಲಿ ರೈತರು ಪರ್ಯಾಯ ಬೆಳೆ ಬೆಳೆಯಲು ಇರುವ ಅವಕಾಶಗಳ ಬಗ್ಗೆ ಕೃಷಿ ಇಲಾಖೆ ರೈತರಿಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.  ಇದಕ್ಕೆ ಪ್ರತಿಕ್ರಿಯಿಸಿದ ಜಂಟಿಕೃಷಿ ನಿರ್ದೇಶಕ ರಾಮದಾಸ್ ಅವರು ಆಗಸ್ಟ್ ತಿಂಗಳಿನ ಮೊದಲನೆ ಪಾಕ್ಷಿಕದಲ್ಲಿ ಮಳೆಯಾದಲ್ಲಿ ಮುಂಗಾರು ಹಂಗಾಮಿನ ಮುಖ್ಯ ಬೆಳೆಗಳಾದ ಮುಸುಕಿನಜೋಳ, ಸಜ್ಜೆ, ಶೇಂಗಾ, ಹೆಸರು ಬದಲಿಗೆ ನವಣೆ, ಸೂರ್ಯಕಾಂತಿ ಹಾಗೂ ಹುರುಳಿ ಬೆಳೆಗಳನ್ನು ಪರ್ಯಾಯವಾಗಿ ಬಿತ್ತನೆ ಮಾಡಬಹುದಾಗಿದೆ.  ಆಗಸ್ಟ್ ತಿಂಗಳ ಎರಡನೆ ಪಾಕ್ಷಿಕದಲ್ಲಿ ಮಳೆಯಾದಲ್ಲಿ ಸೂರ್ಯಕಾಂತಿ, ಹುರುಳಿ ಹಾಗೂ ಜಯಧರ್ ಹತ್ತಿ ಬಿತ್ತಬಹುದಾಗಿದೆ.  ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ದಾಸ್ತಾನು ಇದೆ.  ಯಾವುದೇ ಕೊರತೆ ಇಲ್ಲ ಎಂದರು. ಗೋಶಾಲೆ ಬಗ್ಗೆ ಸರ್ಕಾರ ನಿರ್ಧಾರ : ಜಿಲ್ಲೆಯಲ್ಲಿ ಮಳೆ ವಿಫಲವಾದ ಹಿನ್ನೆಲೆಯಲ್ಲಿ ಮೇವಿನ ಸಮಸ್ಯೆ ತಲೆದೋರುವ ಸಾಧ್ಯತೆಗಳಿರುವುದರಿಂದ, ಗೋಶಾಲೆಗಳನ್ನು ಪ್ರಾರಂಭ ಮಾಡುವುದರ ಬಗ್ಗೆ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಿದೆ.  ಇದಕ್ಕೆ ಪೂರಕವಾಗಿ ಜಿಲ್ಲೆಯಲ್ಲಿನ ಸ್ಥಿತಿ-ಗತಿಗಳ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸರ್ಕಾರಕ್ಕೆ ವರದಿ ಸಲ್ಲಿಸಲಿವೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಿಳಿಸಿದರು. ಮೇವು ಬೀಜ ಪೂರೈಕೆಗೆ ಆದ್ಯತೆ ನೀಡಿ : ಪಶುಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ. ಭಾಸ್ಕರನಾಯಕ್ ಅವರು ಮಾತನಾಡಿ, ಜಿಲ್ಲೆಯಲ್ಲಿ ೩೩೯೯೪೭ ಜಾನುವಾರುಗಳಿದ್ದು, ಒಂದು ವಾರಕ್ಕೆ ಕನಿಷ್ಟ ೧೯೦೩೭ ಮೆ. ಟನ್ ಮೇವು ಅಗತ್ಯ ಉಂಟಾಗುತ್ತದೆ.  ಸದ್ಯ ಜಿಲ್ಲೆಯಲ್ಲಿನ ಮೇವಿನ ಪರಿಸ್ಥಿತಿ ಪರಿಶೀಲಿಸಿದ್ದು ಕೇವಲ ೬ ವಾರಗಳವರೆಗೆ ಆಗುವಷ್ಟು ಮೇವು ಮಾತ್ರ ಲಭ್ಯವಿರುವ ಸಾಧ್ಯತೆ ಇದೆ.  ಜಿಲ್ಲೆಯ ೧೩ ಹೋಬಳಿಗಳಲ್ಲಿ ಮೇವಿನ ಸಮಸ್ಯೆ ತಲೆದೋರುತ್ತಿದ್ದು, ಕನಿಷ್ಟ ೫೦೦ ಜಾನುವಾರುಗಳಿಗೆ ೯೦ ದಿನಗಳಿಗೆ ಗೋಶಾಲೆ ತೆರೆಯಲು, ಪ್ರತಿ ಗೋಶಾಲೆಗೆ ಮೇವು, ನಿರ್ವಹಣೆ, ವಿದ್ಯುತ್ ಸಂಪರ್ಕ, ಮೂಲಭೂತ ಸೌಕರ್ಯ ಒದಗಿಸಲು ೫೧. ೨೧ ಲಕ್ಷ ರೂ. ವೆಚ್ಚವಾಗುವುದಾಗಿ ಅಂದಾಜಿಸಲಾಗಿದೆ.  ಈಗಾಗಲೆ ಇಲಾಖೆಯಿಂದ ಮೇವು ಬೆಳೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ನೀರಾವರಿ ಪ್ರದೇಶದ ರೈತರಿಗೆ ಉಚಿತ ಮೇವು ಬೀಜದ ಮಿನಿ-ಕಿಟ್ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.   ಜಿಲ್ಲೆಯಲ್ಲಿ ನೀರಾವರಿ ಸೌಲಭ್ಯ ಹೊಂದಿರುವ ರೈತರಿಗೆ ಉಚಿತ ಮೇವಿನ ಬೀಜವನ್ನು ಪೂರೈಸಿ, ಮೇವು ಬೆಳೆಯಲು ಉತ್ತೇಜನ ನೀಡಲು ಕೂಡಲೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸೂಚಿಸಿದರು.
ಕುಡಿಯುವ ನೀರು : ಜಿಲ್ಲೆಯ ನಗರ ಮತ್ತು ಪಟ್ಟಣಗಳಲ್ಲಿ ಮಳೆಯ ಕೊರತೆಯಿಂದ ಕುಡಿಯುವ ನೀರಿನ ಪೂರೈಕೆಯಲ್ಲಿ ತೊಂದರೆಯಾಗಬಹುದಾದ ಸಾಧ್ಯತೆಗಳ ಬಗ್ಗೆ ಪರಿಶೀಲನೆ ನಡೆಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಕೊಪ್ಪಳ ಮತ್ತು ಗಂಗಾವತಿ ಮತ್ತು ಕುಷ್ಟಗಿಯಲ್ಲಿ ಸದ್ಯ ಕುಡಿಯುವ ನೀರಿನ ತೊಂದರೆ ಇಲ್ಲ.  ಆದರೆ ಯಲಬುರ್ಗಾ ಪಟ್ಟಣಕ್ಕೆ ತೊಂದರೆಯಾಗದಂತೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು.  ಉಳಿದಂತೆ ಜಿಲ್ಲೆಯ ಗ್ರಾಮೀಣ ಪ್ರದೇಶಗಳ ಬಗ್ಗೆ ಪರಿಸ್ಥಿತಿ ಪರಾಮರ್ಶೆ ನಡೆಸಬೇಕು.  ವಿದ್ಯುತ್ ಸಂಪರ್ಕ ಬಾಕಿ ಇರುವ ಕುಡಿಯುವ ನೀರಿನ ಘಟಕಗಳಿಗೆ ಕೂಡಲೆ ವಿದ್ಯುತ್ ಸಂಪರ್ಕ ಒದಗಿಸಿ, ನೀರು ಸರಬರಾಜು ಪ್ರಾರಂಭವಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.  ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಮನೋಹರ್ ವಡ್ಡರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಮಳೆಯ ಕೊರತೆ ಹಿನ್ನೆಲೆಯಲ್ಲಿ ೧೪೩ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಹುದೆಂದು ಅಂದಾಜಿಸಲಾಗಿದ್ದು, ಸಮಸ್ಯೆ ಪರಿಹರಿಸಲು ೮೦೭. ೬೦ ಲಕ್ಷ ರೂ.ಗಳ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ ಎಂದರು. ಗುಳೆ ತಡೆಗಟ್ಟಲು ವಿಶೇಷ ಯೋಜನೆ ರೂಪಿಸಿ : ಜಿಲ್ಲೆಯಲ್ಲಿ ಉದ್ಯೋಗ ಅರಸಿ, ಗುಳೆ ಹೋಗುತ್ತಿರುವ ಬಗ್ಗೆ ವರದಿಗಳು ಬರುತ್ತಿವೆ.  ಗುಳೆ ತಡೆಗಟ್ಟಲು ಉದ್ಯೋಗಖಾತ್ರಿ ಯೋಜನೆಯಡಿ ವಿಶೇಷ ಕ್ರಿಯಾ ಯೋ
     ಸಭೆಯಲ್ಲಿ ಜಿಲ್ಲಾಧಿಕಾರಿ ಆರ್.ಆರ್. ಜನ್ನು, ಉಪವಿಭಾಗಾಧಿಕಾರಿ ಪಿ.ಎಸ್. ಮಂಜುನಾಥ್, ಜಂಟಿಕೃಷಿ ನಿರ್ದೇಶಕ ರಾಮದಾಸ್, ತೋಟಗಾರಿಕೆ ಉಪನಿರ್ದೇಶಕ ಶಶಿಕಾಂತ್ ಕೋಟಿಮನಿ, ಸೇರಿದಂತೆ ಎಲ್ಲ ತಾಲೂಕುಗಳ ತಾ.ಪಂ. ಕಾರ್ಯನಿರ್ವಾಹ ಅಧಿಕಾರಿಗಳು, ತಹಸಿಲ್ದಾರರು, ವಿವಿಧ ಇಲಾಖೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಜನೆ ರೂಪಿಸಿ, ಜಾರಿಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದರು.  ಇದಕ್ಕೆ ಪ್ರತಿಕ್ರಿಯಿಸಿದ ಜಿ.ಪಂ. ಸಿಇಓ ಕೃಷ್ಣ ಉದಪುಡಿ ಅವರು, ಜಿಲ್ಲೆಯಲ್ಲಿ ಈ ವರ್ಷ ಉದ್ಯೋಗಖಾತ್ರಿ ಯೋಜನೆಯಡಿ ೫೬ ಕೋಟಿ ರೂ.ಗಳ ಕ್ರಿಯಾ ಯೋಜನೆ ಸಿದ್ಧಪಡಿಸಿ, ಅನುಮೋದನೆ ನೀಡಲಾಗಿದೆ.  ಇದರಲ್ಲಿ ಕೂಲಿಯಾಧಾರಿತ ಯೋಜನೆ ರೂಪಿಸಲಾಗಿದ್ದು, ಕೊಪ್ಪಳ ತಾಲೂಕು -೧೮ ಕೋಟಿ, ಗಂಗಾವತಿ-೧೫ ಕೋಟಿ, ಕುಷ್ಟಗಿ-೧೬ ಕೋಟಿ ರೂ.ಗಳ ಯೋಜನೆಗೆ ಅನುಮೋದನೆ ನೀಡಿ, ಈಗಾಗಲೆ ಆಯಾ ಗ್ರಾಮ ಪಂಚಾಯತಿಗಳಲ್ಲಿ ಕೆರೆ ಹೂಳೆತ್ತುವುದು, ರಸ್ತೆ ಕಾಮಗಾರಿಗಳಿಗೆ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ ಎಲ್ಲರಿಗೂ ಉದ್ಯೋಗ ನೀಡಲಾಗುತ್ತಿದೆ.  ರೋಜಗಾರ್ ಆಚರಣೆ ಮೂಲಕ ಉದ್ಯೋಗಖಾತ್ರಿ ಯೋಜನೆ ಕುರಿತಂತೆ ಮಾಹಿತಿ ನೀಡಿ, ಉದ್ಯೋಗಕ್ಕೆ ಉತ್ತೇಜನ ನೀಡಲಾಗುತ್ತಿದೆ ಎಂದರು.

Please follow and like us:
error

Leave a Reply

error: Content is protected !!