ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಶಿಷ್ಯವೇತನ : ಅವಧಿ ವಿಸ್ತರಣೆ

 ಜಿಲ್ಲಾ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರಸಕ್ತ ಸಾಲಿನ ಮೆರಿಟ್-ಕಂ-ಮೀನ್ಸ್ ಮತ್ತು ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನವನ್ನು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧರು ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಲಾಗಿದೆ ಎಂದು ಬಿಸಿಎಂ ಅಧಿಕಾರಿ ಕಲ್ಲೇಶ ಅವರು ತಿಳಿಸಿದ್ದಾರೆ.
ಯಾವುದೇ ತಾಂತ್ರಿಕ ಕಾಲೇಜುಗಳಲ್ಲಿ ಪ್ರವೇಶ ಪಡೆದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ  ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನ ಮಂಜೂರು ಮಾಡಲಾಗುತ್ತಿದ್ದು, ಆನ್‍ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು ಅ.07 ಕೊನೆಯ ದಿನವಾಗಿರುತ್ತದೆ. ಮೂಲ ಅರ್ಜಿ ಮತ್ತು ದಾಖಲೆಗಳನ್ನು ಸಂಬಂಧಿಸಿದ ಕಾಲೇಜಿನ ಪ್ರಾಂಶುಪಾಲರಿಂದ ದೃಡೀಕರಿಸಿ  ಅ.15 ರೊಳಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮಾಹಿತಿ ಕೇಂದ್ರ, ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಛೇರಿ, ಕೊಪ್ಪಳ ಇಲ್ಲಿಗೆ ಖುದ್ದಾಗಿ ಅಥವಾ ಅಂಚೆ ಅಥವಾ ಕೊರಿಯರ್ ಮೂಲಕ ಕಳುಹಿಸಬಹುದು. 
  ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನವನ್ನು ಮಂಜೂರು ಮಾಡಲಾಗುತ್ತಿದ್ದು, ಆನ್‍ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.  ಮೂಲ ಅರ್ಜಿ ಮತ್ತು ದಾಖಲೆಗಳನ್ನು ಸಂಬಂಧಿಸಿದ ಕಾಲೇಜಿನ ಪ್ರಾಂಶುಪಾಲರಿಂದ ದೃಡೀಕರಿಸಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮಾಹಿತಿ ಕೇಂದ್ರ, ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಛೇರಿ, ಕೊಪ್ಪಳ ಇಲ್ಲಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮಾಹಿತಿ ಕೇಂದ್ರದ ದೂರವಾಣಿ ಸಂಖ್ಯೆ: 08539-225070 ಸಂಪರ್ಕಿಸಬಹುದು.
 ಅರ್ಜಿಯೊಂದಿಗೆ ವಿವಿಧ ದಾಖಲೆಗಳಾದ ಎಸ್‍ಎಸ್‍ಎಲ್‍ಸಿ/ಪಿಯುಸಿ/ಡಿಪ್ಲೋಮಾ ಅಂಕಪಟ್ಟಿ, ಆದಾಯ ಪ್ರಮಾಣಪತ್ರ, ಹಾಗೂ ಅಫಿಡೆವಿಟ್ ಸೇರಿದಂತೆ ಅಗತ್ಯ ದಾಖಲಾತಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ವೆಬ್‍ಸೈಟ್ ವಿಳಾಸ :  www.momascholarship.kar.nic.in  ಇತರೆ ಮಾಹಿತಿಗಾಗಿ ವೆಬ್ ಸೈಟ್ ವಿಳಾಸ:  www.gokdom.gov.in   ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಬಿಸಿಎಂ ಅಧಿಕಾರಿ ಕಲ್ಲೇಶ   ತಿಳಿಸಿದ್ದಾರೆ.
Please follow and like us:
error

Related posts

Leave a Comment