You are here
Home > Koppal News > ಫೆ.೧೪ ರಂದು ಕೊಪ್ಪಳದಲ್ಲಿ ಮೆಗಾ ಲೋಕ್ ಅದಾಲತ್

ಫೆ.೧೪ ರಂದು ಕೊಪ್ಪಳದಲ್ಲಿ ಮೆಗಾ ಲೋಕ್ ಅದಾಲತ್

  ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಜಿ ಸಂಧಾನದ ಮೂಲಕ ನ್ಯಾಯಾಲಯದಲ್ಲಿರುವ ಪ್ರಕರಣಗಳು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅನುಕೂಲವಾಗುವಂತೆ ಫೆ. ೧೪ ರಂದು ಕೊಪ್ಪಳದ ನ್ಯಾಯಾಲಯದಲ್ಲಿ ಮೆಗಾ ಲೋಕ ಅದಾಲತ್ ಆಯೋಜಿಸಲಾಗಿದೆ.
  ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಇತ್ಯರ್ಥವಾಗುವಂತಹ ಬ್ಯಾಂಕ್ ಪ್ರಕರಣಗಳು, ವ್ಯಾಜ್ಯ ಪೂರ್ವ ಪ್ರಕರಣಗಳು ಮತ್ತು ಚಕ್‌ಬೌನ್ಸ್ (ಎನ್‌ಐ.೧೩೮ ಆಕ್ಟ್) ಪ್ರಕರಣಗಳನ್ನು ಜನತಾ ನ್ಯಾಯಾಲಯದ ಮುಖಾಂತರ ಇತ್ಯರ್ಥಗೊಳಿಸಲು ಉದ್ದೇಶಿಸಿದ್ದು,  ನ್ಯಾಯಾಲಯದಲ್ಲಿ ಬಾಕಿ ಇರುವ ಬ್ಯಾಂಕ್ ಪ್ರಕರಣಗಳು ಹಾಗೂ ಚಕ್‌ಬೌನ್ಸ್ (ಎನ್‌ಐ.೧೩೮ ಆಕ್ಟ್) ಪ್ರಕರಣಗಳನ್ನು ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು. ವ್ಯಾಜ್ಯವನ್ನು ಜನತಾ ನ್ಯಾಯಾಲಯದ ಮೂಲಕ ಶೀಘ್ರವಾಗಿ ಇತ್ಯರ್ಥಗೊಳಿಸಿಕೊಳ್ಳಬಹುದು.  ಜನತಾ ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜಿ ಮಾಡಿಕೊಳ್ಳಲು ಮಾರ್ಗದರ್ಶನ ಮಾಡಲಾಗುವುದು. ಸೌಹಾರ್ದಯುತವಾಗಿ ಪ್ರಕರಣವು ಇತ್ಯರ್ಥಗೊಳ್ಳುವುದರಿಂದ ಬಾಂಧವ್ಯವು ಉಳಿದು ವಿವಾದವು ಇತ್ಯರ್ಥಗೊಳ್ಳುತ್ತದೆ. ಅಲ್ಲದೆ  ಜನತಾ ನ್ಯಾಯಾಲಯದಲ್ಲಿ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು.  ಕಡಿಮೆ ಖರ್ಚು, ಶೀಘ್ರ ವಿಲೇವಾರಿಗಾಗಿ ಇದೊಂದು ವಿಶೇಷ ಅವಕಾಶವಾಗಿದೆ.  

Leave a Reply

Top