ಮೇ.೨೧ ರಿಂದ ಆರನೇ ಆರ್ಥಿಕ ಗಣತಿ ತರಬೇತಿ ಕಾರ್ಯಾಗಾರ

 ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯಿಂದ ೬ನೇ ಆರ್ಥಿಕ ಗಣತಿ (೨೦೧೨-೧೩) ನಗರ ಮತ್ತು ಗ್ರಾಮೀಣ ಪ್ರದೇಶದ ಚಾರ್ಜ ಅಧಿಕಾರಿಗಳಿಗೆ ಹಾಗೂ ಮಾಸ್ಟರ್ ತರಬೇತಿದಾರರಿಗೆ ತರಬೇತಿ ಕಾರ್ಯಾಗಾರವನ್ನು ಮೇ.೨೧ ರಿಂದ ಮೇ.೨೨ ರವರೆಗೆ ಜಿ.ಪಂ.ಸಭಾಂಗಣದಲ್ಲಿ ಬೆಳಿಗ್ಗೆ ೧೦.೦೦ ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಾಗಾರದ ಉದ್ಘಾಟನೆಯನ್ನು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿ.ಪಂ.ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಿ.ಕೆ.ರವಿ, ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿ.ಪಂ.ಮುಖ್ಯ ಯೋಜನಾಧಿಕಾರಿ ಟಿ.ಪಿ.ದಂಡಿಗದಾಸರ, ಸಹಾಯಕ ಆಯುಕ್ತ ಶರಣಬಸಪ್ಪ ಅವರು ಆಗಮಿಸಲಿದ್ದಾರೆ ಎಂದು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳು ತಿಳಿಸಿದ್ದಾರೆ.
Please follow and like us:

Leave a Reply