ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ.

ಕೊಪ್ಪಳ, ಜು.೧೫  ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಶಿಷ್ಯವೇತನ ಮಂಜೂರಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
     ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧರು, ಪಾರ್ಸಿ ಜನಾಂಗದ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ. ಯಾವುದೇ ತಾಂತ್ರಿಕ ಕಾಲೇಜುಗಳಲ್ಲಿ ಪ್ರವೇಶ ಪಡೆದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿ ವೇತನವನ್ನು ಮಂಜೂರು ಮಾಡಲಾಗುತ್ತಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಹೊಸ ವಿದ್ಯಾರ್ಥಿಗಳಿಗೆ ಸೆಪ್ಟಂಬರ್.೩೦ ಹಾಗೂ ನವೀಕರಣ ವಿದ್ಯಾರ್ಥಿಗಳಿಗೆ ನವಂಬರ್.೧೫ ಕೊನೆ ದಿನಾಂಕವಾಗಿದೆ. ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ  ವಿದ್ಯಾರ್ಥಿ ವೇತನವನ್ನು ಮಂಜೂರು ಮಾಡಲಾಗುತ್ತಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಹೊಸ ವಿದ್ಯಾರ್ಥಿಗಳಿಗೆ ಸೆಪ್ಟಂಬರ್.೧೫ ಹಾಗೂ ನವೀಕರಣ ವಿದ್ಯಾರ್ಥಿಗಳಿಗೆ ಅಕ್ಟೋಬರ್.೧೦ ಕೊನೆ ದಿನಾಂಕವಾಗಿದೆ.
     ಅರ್ಜಿ ಸಲ್ಲಿಸಲಿಚ್ಛಿಸುವ ವಿದ್ಯಾರ್ಥಿಗಳು ಮೂಲ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪದವಿ ಪ್ರಮಾಣ ಪತ್ರ, ಅಂಕಪಟ್ಟಿ, ಆಯಾ ಕಾಲೇಜುಗಳ ಶುಲ್ಕ ತುಂಬಿದ ರಶೀದಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ನಕಲು ಪ್ರತಿ, ವಿದ್ಯಾರ್ಥಿಯ ಭಾವಚಿತ್ರ ಮತ್ತು ಸಹಿ ಇತ್ಯಾದಿ ದಾಖಲೆಗಳನ್ನು ಲಗತ್ತಿಸಿ, ಸಂಬಂಧಿಸಿದ ಕಾಲೇಜಿನ ಪ್ರಾಂಶುಪಾಲರಿಂದ ದೃಢೀಕರಿಸಿ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮಾಹಿತಿ ಕೇಂದ್ರ, ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಛೇರಿ, ಕೊಪ್ಪಳ ಇಲ್ಲಿಗೆ ಸಲ್ಲಿಸಬಹುದಾಗಿದೆ. ಆನ್‌ಲೈನ್ ಅರ್ಜಿಗಳನ್ನು
www.scholarship.gov.in
ಮೂಲಕ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್

www.gokdom.gov.in  ಗೆ ಭೇಟಿ ನೀಡಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ. 

Related posts

Leave a Comment