ಪ್ರೌಢಶಾಲಾ ದೈಹಿಕ ಶಿಕ್ಷಕರಿಗೆ ಕರಾಟೆ ತರಬೇತಿ

  ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಕರಾಟೆ ತರಬೇತಿಯನ್ನು   ಕೊಪ್ಪಳ ತಾಲ್ಲೂಕಿನ ಸರ್ಕಾರಿ ಪ್ರೌಢ ಶಾಲೆಯ ದೈಹಿಕ ಶಿಕ್ಷಕರು ಹಾಗೂ ಸಹ ಶಿಕ್ಷಕರಿಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು, ಅಂತರ್‌ರಾಷ್ಟ್ರೀಯ ಕರಾಟೆ ಪಟು ಶ್ರೀನಿವಾಸ ಪಂಡಿತ ಅವರು ಈ ತರಬೇತಿಯನ್ನು ನೀಡುತ್ತಿದ್ದಾರೆ.
           ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕರಾದ ವೈ.ಸುದರ್ಶನರಾವ್ ಇವರ ಮಾರ್ಗದರ್ಶನದಲ್ಲಿ ಈ ತರಬೇತಿಯನ್ನು ಏರ್ಪಡಿಸಲಾಗಿದ್ದು, ತರಬೇತಿಯು ಸೆ.೨೯ ರವರೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ
.

Please follow and like us:
error