ಅಕ್ಷತಾ ಸಾಲಿಮಠ ರಾಜ್ಯ ಮಟ್ಟಕ್ಕೆ ಆಯ್ಕೆ.

ಕೊಪ್ಪಳ-25- ತಾಲೂಕಿನ ಕಾತರಕಿ ಗುಡ್ಲಾನೂರ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಕ್ಷತಾ ತಂದಿ ಮಲ್ಲಯ್ಯ ಸಾಲಿಮಠ ಕೊಪ್ಪಳದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಅಣಕು ಯುವಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕಿಯಾಗಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ ಈ ಸಂದರ್ಭದಲ್ಲಿ ಬಾಲಕರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರ ನಾಗರಾಜ ರಾವ್ ಉಪನ್ಯಾಸಕ ರಜಪೂತ, ಉ
    ರಾಜ್ಯಮಟ್ಟಕ್ಕೆ ಆಯ್ಕೆಗೊಂಡ ಅಕ್ಷತಾ ಸಾಲಿಮಠ ಅವರಿಗೆ ಸ.ಪ.ಪೂರ್ವ ಕಾಲೇಜಿನ ಪ್ರಾಚಾರ್ಯ ಐ.ಎಮ್. ಚಿಕ್ಕರಡ್ಡಿ ಹಾಗೂ ಕಾಲೇಜಿನ ಸಿಬ್ಬಂದಿ ವರ್ಗ ಮತ್ತು ಕಾಲೇಜಿನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಹಾಗೂ ಕೆ.ಎಮ್.ಎಪ್ ಅಧ್ಯಕ್ಷ ವೆಂಕನಗೌಡ ಹಿರೇಗೌಡ್ರು ಕಾಲೇಜಿನ ಉಪಾಧ್ಯಕ್ಷ ಮಂಜುನಾಥ ಮೇಟಿ, ಕಾತರಕಿ ಗುಡ್ಲಾನೂರ ಗ್ರಾ.ಪಂ ಅಧ್ಯಕ್ಷೆ ಮಲ್ಲಮ್ಮ ಮಾಂತಪ್ಪನವರು, ಉಪಾಧ್ಯಕ್ಷ ಬಸವರಾಜ ಅಂಗಡಿ, ಮತ್ತು ಗ್ರಾ.ಪಂ ಸದಸ್ಯರು, ಗ್ರಾಮದ ಹಿರಿಯರಾದ ಕೃಷ್ಣಪ್ಪ ಬೆಟಗೇರಿ, ಮಲ್ಲಣ್ಣ ಗುಗ್ರಿ, ರಾಜ್ಯ ಯುವ ಪ್ರಶಸ್ತಿ ವಿಜೇತ ಜಗದಯ್ಯ ಸಾಲಿಮಠ, ಹರ್ಷವ್ಯಕ್ತ ಪಡಿಸಿದ್ದಾರೆ.

ಪನ್ಯಾಸಕಿ ಜಯಶ್ರೀ ಗುರುಫಾದ ಮಠ, ಜಿಲ್ಲೆಯ ಎಲ್ಲಾ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು ೭೮ ಕಾಲೇಜಿನ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಅಣಕು ಯುವ ಸಂಸತ್ತಿನಲ್ಲಿ ಭಾಗವಹಿಸಿದ್ದರು.

Please follow and like us:
error