You are here
Home > Koppal News > ಜು.೨೧ ರಂದು ವಿದ್ಯಾರ್ಥಿಗಳಿಗೆ ಕಾನೂನು ವಿದ್ಯಾ ಪ್ರಸಾರ

ಜು.೨೧ ರಂದು ವಿದ್ಯಾರ್ಥಿಗಳಿಗೆ ಕಾನೂನು ವಿದ್ಯಾ ಪ್ರಸಾರ

: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ನ್ಯಾಷನಲ್ ಆಂಗ್ಲ ಮಾಧ್ಯಮ ಸಂಯುಕ್ತ ಪ್ರೌಢಶಾಲೆ ಭಾಗ್ಯನಗರ ಇವರುಗಳ ಸಂಯುಕ್ತ ಆಶ್ರಯದಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಗಾಗಿ ವಿಶೇಷ ಕಾನೂನು ವಿದ್ಯಾ ಪ್ರಸಾರ ಕಾರ್ಯಕ್ರಮ ಜು.೨೧ ರಂದು ಬೆಳಿಗ್ಗೆ ೯.೩೦ ಕ್ಕೆ ಭಾಗ್ಯನಗರದ ನ್ಯಾಷನಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಆವರಣದಲ್ಲಿ ಏರ್ಪಡಿಸಲಾಗಿದೆ.
        ಕಾರ್ಯಕ್ರಮದ ಉದ್ಘಾಟನೆಯನ್ನು ತ್ವರಿತ ನ್ಯಾಯಾಲಯದ ನ್ಯಾಯಾಧೀಶರಾದ ಎಲ್.ಬಿ. ಜಂಬಗಿ ಅವರು ನೆರವೇರಿಸುವರು. ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ಕಾರ್ಯದರ್ಶಿ ಪ್ರಹ್ಲಾದ್ ಅಗಳಿ ಅಧ್ಯಕ್ಷತೆ ವಹಿಸುವರು.  ಮುಖ್ಯ ಅತಿಥಿಗಳಾಗಿ  ಸಿವಿಲ್ ಜಡ್ಜ್ ಶಿವರಾಮ ಕೆ., ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಪ್ರಭುರಾಜ ಇನಾಮತಿ, ಜಿಲ್ಲಾ ಸರ್ಕಾರಿ ವಕೀಲ ವಿ.ಎಂ. ಭೂಸನೂರಮಠ, ಹಿರಿಯ ವಕೀಲ ಆರ್.ಬಿ. ಪಾನಘಂಟಿ, ಭಾಗ್ಯನಗರ ಸರ್ಕಾರಿ ಪ.ಪೂ. ಕಾಲೇಜು ಪ್ರಾಚಾರ್ಯ ಸಿ.ವಿ. ಜಡಿಯವರ, ಜಿ.ಪಂ. ಸದಸ್ಯೆ ವನೀತಾ ವೀರಣ್ಣ ಗಡಾದ್, ತಾ.ಪಂ. ಸದಸ್ಯರುಗಳಾದ ದಾನಪ್ಪ ಕವಲೂರು, ಶ್ರೀನಿವಾಸ ಹ್ಯಾಟಿ, ಭಾಗ್ಯನಗರ ಗ್ರಾ.ಪಂ. ಅಧ್ಯಕ್ಷೆ ಲಕ್ಷ್ಮಿಬಾಯಿ ಬಾಲಚಂದ್ರಸಾ ಬಾವಿಕಟ್ಟಿ, ಉಪಾಧ್ಯಕ್ಷ ಶ್ರೀದರ ಹುರಕಡ್ಲಿ ಆಗಮಿಸುವರು.  ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಎ.ವಿ.ಕಣವಿ, ಅವರು ಮೂಲಭೂತ ಹಕ್ಕುಗಳ ವಿಷಯ ಕುರಿತು, ವಕೀಲರು ಹಾಗೂ ಬಾಲ ನ್ಯಾಯ ಮಂಡಳಿಯ ಸದಸ್ಯೆ ಸಾವಿತ್ರಿ ಮುಜುಂದಾರ ಅವರು ಮಕ್ಕಳ ಪಾಲನೆ ಮತ್ತು ಸಂರಕ್ಷಣೆ ಕುರಿತು, ಸಹ ಶಿಕ್ಷಕ ಮಂಜುನಾಥ ಚಿತ್ರಗಾರ ಅವರು ಮಕ್ಕಳ ರಕ್ಷಣೆಯಲ್ಲಿ ಶಿಕ್ಷಕರ ಪಾತ್ರ ಹಾಗೂ ಪಾಲಕರ ಕರ್ತವ್ಯಗಳು ವಿಷಯ ಕುರಿತು ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

Leave a Reply

Top