ಡಿ.೧೦ ರಂದು ಮಾನವ ಹಕ್ಕುಗಳ ದಿನಾಚರಣೆ

 : ಮಾನವ ಹಕ್ಕುಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದಕ್ಕೆ ವಿಶ್ವ ಮಾನವ ಹಕ್ಕುಗಳ ದಿನವನ್ನಾಗಿ ಡಿ.೧೦ ರಂದು ಆಚರಿಸಲಾಗುತ್ತಿದ್ದು, ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್‌ನಲ್ಲಿ ಡಿ.೧೦ ರಂದು ಮಾನವ ಹಕ್ಕುಗಳ ದಿನಾಚರಣೆಯನ್ನು ಏರ್ಪಡಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ|| ಸುರೇಶ ಬಿ.ಇಟ್ನಾಳ ಅವರು ತಿಳಿಸಿದ್ದಾರೆ. 
ಮಾನವ ಹಕ್ಕುಗಳ ಸಂರಕ್ಷಣೆಗಾಗಿ ದುಡಿಯುತ್ತಿರುವ ಸರ್ಕಾರೇತರ ಸಂಸ್ಥೆಗಳನ್ನೊಳಗೊಂಡಂತೆ ನ್ಯಾಯಾಂಗ ಇಲಾಖೆಯ ನ್ಯಾಯಾಧೀಶರು ಮತ್ತು ವಕೀಲರುಗಳನ್ನು, ಪೊಲೀಸ್ ಇಲಾಖೆಯ ಕಮೀಷನರ್/ಎಸ್.ಪಿ. ಮತ್ತು ಇತರೆ ಅಧಿಕಾರಿಗಳು ಹಾಗೂ ಕಾನೂನು ಸೇವಾ ಪ್ರಾಧಿಕಾರದವರ ಸಂಯೋಜನೆಯೊಂದಿಗೆ ಹಾಗೂ ಮಾನವ ಹಕ್ಕುಗಳ ಬಗ್ಗೆ ತಿಳುವಳಿಕೆ/ಅನುಭವ ಇರುವ ಪರಿಣಿತರನ್ನು ಆಹ್ವಾನಿಸಿ ಮಾನವ ಹಕ್ಕುಗಳ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು, ನೌಕರರು ಮತ್ತು ಸಾರ್ವಜನಿಕರಲ್ಲಿ ಹಾಗೂ ಸ್ಥಳೀಯ ಸರ್ಕಾರೇತರ ಸಂಘ ಸಂಸ್ಥೆಗಳಿಗೆ ಮಾನವ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದಕ್ಕಾಗಿ ಮಾನವ ಹಕ್ಕುಗಳ ದಿನಾಚರಣೆಯನ್ನು ಜಿಲ್ಲಾ ಕೇಂದ್ರಗಳಲ್ಲಿ ಆಚರಿಸಲಾಗುತ್ತಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ|| ಸುರೇಶ ಬಿ.ಇಟ್ನಾಳ ತಿಳಿಸಿದ್ದಾರೆ. 

Leave a Reply