ಮಾ. ೦೫ ರಂದು ಸರ್ವಜ್ಞ ಹಾಗೂ ದಲಿತ ವಚನಕಾರರ ಜಯಂತಿ.

ಕೊಪ್ಪಳ ಮಾ. ೦೩ (ಕ ವಾ) ತ್ರಿಪದಿ ಕವಿ ಸರ್ವಜ್ಞ ಹಾಗೂ ಶ್ರೇಷ್ಠ ದಲಿತ ವಚನಕಾರರ ಜಯಂತಿ ಕಾರ್ಯಕ್ರಮ ಮಾ. ೦೫ ರಂದು ಸಂಜೆ ೦೪ ಗಂಟೆಗೆ ಕೊಪ್ಪಳದ ಸಾಹಿತ್ಯ ಭವನದಲ್ಲಿ ನಡೆಯಲಿದೆ.
     ತ್ರಿಪದಿ ಕವಿ ಸರ್ವಜ್ಞ ಹಾಗೂ ಶ್ರೇಷ್ಠ ದಲಿತ ವಚನಕಾರರಾದ ಮಾದಾರ ಚನ್ನಯ್ಯ, ಮಾದಾರ ಧೂಳಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ, ಉರಿಲಿಂಗ ಪೆದ್ದಿ ಅವರ ಜಯಂತಿ ಕಾರ್ಯಕ್ರಮ ಮಾ. ೦೫ ರಂದು ಕೊಪ್ಪಳ ನಗರದಲ್ಲಿ ಜರುಗಲಿದೆ.  ಜಯಂತಿ ಆಚರಣೆ ಅಂಗವಾಗಿ ಅಂದು ಬೆಳಿಗ್ಗೆ ೦೯ ಗಂಟೆಗೆ ವಚನಕಾರರ ಭಾವಚಿತ್ರಗಳ ಮೆರವಣಿಗೆ ನಗರದ ಗವಿಮಠ ಆವರಣದಿಂದ ಹೊರಟು, ಜವಾಹರ ರಸ್ತೆ ಮೂಲಕ ಸಾಹಿತ್ಯ ಭವನದವರೆಗೆ ಸಾಗಿಬರಲಿದೆ.  ಅಂದು ಸಂಜೆ ೦೪ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ವೇದಿಕೆ ಸಮಾರಂಭ ಜರುಗಲಿದ್ದು, ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ಎಸ್ ತಂಗಡಗಿ ಉದ್ಘಾಟನೆ ನೆರವೇರಿಸುವರು.  ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಸಮಾರಂಭದ ಅಧ್ಯಕ್ಷತೆ ವಹಿಸುವರು.  ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ್ ಇಟಗಿ, ಅಮರನಾಥ ಪಾಟೀಲ, ಶರಣಪ್ಪ ಮಟ್ಟೂರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೈಯ್ಯದ್ ಜುಲ್ಲು ಖಾದರ್ ಖಾದ್ರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಕೆ. ಅನಿಲಕುಮಾರ, ನಗರಸಭೆ ಅಧ್ಯಕ್ಷೆ ಬಸಮ್ಮ ರಾಮಣ್ಣ ಹಳ್ಳಿಗುಡಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.  ಬಳ್ಳಾರಿಯ ಸೇಂಟ್ ಜೋಸೆಫ್ ಬಾಲಕಿಯರ ಪ್ರೌಢಶಾಲೆ ಅಧ್ಯಾಪಕ ಕೆ.ಬಿ. ಸಿದ್ದಲಿಂಗಪ್ಪ ಅವರು ಇದೇ ಸಂದರ್ಭದಲ್ಲಿ ವಿಶೇಷ ಉಪನ್ಯಾಸ ನೀಡುವರು.
Please follow and like us:
error