You are here
Home > Koppal News > ದುರ್ಬಲ ವರ್ಗಗಳ ದಿನಾಚರಣೆ

ದುರ್ಬಲ ವರ್ಗಗಳ ದಿನಾಚರಣೆ

kustagi 
ಕುಷ್ಟಗಿ: `ರಾಷ್ಟ್ರೀಯ ಐಕ್ಯತಾ ಸಪ್ತಾಹ`ದ ಅಂಗವಾಗಿ ಪಟ್ಟಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ ದುರ್ಬಲ ವರ್ಗಗಳ ದಿನಾಚರಣೆ ನಡೆಸಲಾಯಿತು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಜನರ ಸಾಮಾಜಿಕ ಮತ್ತು ಆರ್ಥಿಕ ಏಳಿಗೆಗಾಗಿ ಸರ್ಕಾರ ಜಾರಿಗೊಳಿಸುತ್ತಿರುವ ವಿವಿಧ ಯೋಜನೆಗಳು ಮತ್ತು ಅನುಷ್ಠಾನ ಕುರಿತಂತೆ ಅರಿವು ಮತ್ತು ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಇದರಲ್ಲಿ ಭಾಗವಹಿಸಿದ್ದ ಪಟ್ಟಣದಲ್ಲಿರುವ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ವಸತಿ ನಿಲಯದ ಅನೇಕ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಇಲಾಖೆ ಕಚೇರಿಯಿಂದ ಪ್ರಮುಖ ಬೀದಿಗಳಲ್ಲಿ ಜನಜಾಗೃತಿ ಜಾಥಾ ನಡೆಸಿದರು.
ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ `ರಾಷ್ಟ್ರದ ಸ್ವಾತಂತ್ರ್ಯ ಹಾಗೂ ಐಕ್ಯತೆಯ ಸಂರಕ್ಷಣೆ` ವಿಷಯಕ್ಕೆ ಸಂಬಂಧಿಸಿದಂತೆ ಬಸವೇಶ್ವರ ವೃತ್ತದಲ್ಲಿ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ರಮೇಶ್ ಕಳಸದ ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ ಬೋಧಿಸಿದರು.
ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿನ ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿ ವಸತಿ ನಿಲಯಗಳಲ್ಲಿಯೂ ರಾಷ್ಟ್ರೀಯ ಐಕ್ಯತಾ ಸಪ್ತಾಹದ ಸಂದರ್ಭದಲ್ಲಿ ದುರ್ಬಲ ವರ್ಗಗಳ ದಿನಾಚರಣೆ ಆಚರಿಸಲಾಗಿದ್ದು  ಹಲವು ರೀತಿಯ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು
ನಂತರ ಬಾಲಕರ ವಸತಿ ನಿಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರಮೇಶ ಕಳಸದ ಮಾತನಾಡಿ, ವಿದ್ಯಾರ್ಥಿಗಳು ಕೀಳರಿಮೆ ತೊರೆಯಬೇಕು, ರಾಷ್ಟ್ರೀಯ ಪ್ರಜ್ಞೆ ಹೊಂದುವಂತೆ ಕರೆ ನೀಡಿದರು. ಸಮಾಜ ಕಲ್ಯಾಣ ಇಲಾಖೆ ಮೇಲ್ವಿಚಾರಕರಾದ ಮಹಾಲಿಂಗಪ್ಪ, ಮೀನಾಕ್ಷಿ ಜೋಷಿ, ಕಚೇರಿ ಅಧೀಕ್ಷಕ ಜಾಕೀರ್ ಹುಸೇನ್ ಪಾಲ್ಗೊಂಡಿದ್ದರು.

Leave a Reply

Top