ಡಿ. ೨೦ ರಂದು ಕುಕನೂರಿನಲ್ಲಿ ವಿಚಾರಸಂಕಿರಣ

ಕೊಪ್ಪಳ ಡಿ.೧೯  : ವಾರ್ತಾ ಇಲಾಖೆಯು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕುಕನೂರಿನ ಶ್ರೀ ವಿದ್ಯಾನಂದ ಗುರುಕುಲ ಶಿಕ್ಷಣ ಸಂಸ್ಥೆಯವರ ಸಹಯೋಗದೊಂದಿಗೆ ‘ಸಾಂಕ್ರಾಮಿಕ ರೋಗ ನಿಯಂತ್ರಣದಲ್ಲಿ ಸಮುದಾಯದ ಪಾತ್ರ’ ಕುರಿತ ವಿಚಾರಸಂಕಿರಣವನ್ನು ಡಿ. ೨೦ ರಂದು ಬೆಳಿಗ್ಗೆ ೧೧ ಗಂಟೆಗೆ ಕುಕನೂರಿನ ವಿದ್ಯಾನಂದ ಗುರುಕುಲ ಕಿರಿಯ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದೆ.
  ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹದೇವಸ್ವಾಮಿ ಅವರು ನೆರವೇರಿಸುವರು.  ಶ್ರೀ ವಿದ್ಯಾನಂದ ಗುರುಕುಲ ಶಿಕ್ಷಣ ಸಂಸ್ಥೆಯ ಕಿರಿಯ ಮಹಾವಿದ್ಯಾಲಯದ ಪ್ರಾಚಾರ್ಯ ಕೆ.ಪಿ. ಮುರಳಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು.  ಮುಖ್ಯ ಅತಿಥಿಗಳಾಗಿ ಕುಕನೂರು ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ನರಸಿಂಗಪ್ಪ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಹೆಚ್.ಹೆಚ್. ಮಾದರ್ ಅವರು ಭಾಗವಹಿಸುವರು.  ಯಲಬುರ್ಗಾ ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರಶಾಂತಬಾಬು ಅವರು ಇದೇ ಸಂದರ್ಭದಲ್ಲಿ ವಿಶೇಷ ಉಪನ್ಯಾಸಕರಾಗಿ ಪಾಲ್ಗೊಳ್ಳುವರು ಎಂದು ಜಿಲ್ಲಾ ವಾರ್ತಾಧಿಕಾರಿ ತುಕಾರಾಂ ರಾವ್ ಅವರು ತಿಳಿಸಿದ್ದಾರೆ.

Leave a Reply