ಬಾಲ್ಯ ವಿವಾಹ ನಿರ್ಮೂಲನೆ ಪ್ರಬಂಧ ಸ್ಪರ್ಧೆ ಫಲಿತಾಂಶ ಪ್ರಕಟ

ಕೊಪ್ಪಳ ಜ. ೨೧ (ಕ ವಾ) ಬಾಲ್ಯ ವಿವಾಹ ನಿರ್ಮೂಲನೆಗೊಳಿಸುವ ನಿಟ್ಟಿನಲ್ಲಿ ಯುನಿಸೆಫ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಕಾಲೇಜಿನಲ್ಲಿ ಬುಧವಾರದಂದು ಏರ್ಪಡಿಸಲಾದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟಿಸಲಾಗಿದೆ.
     ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳ ವಿವರ ಇಂತಿದೆ.  ಪ್ರೌಢಶಾಲಾ ವಿಭಾಗದಲ್ಲಿ ಕುಷ್ಟಗಿಯ ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿ ಸರೋಜ ಎಂ.ಜಿ.. ಪದವಿಪೂರ್ವ ವಿಭಾಗದಲ್ಲಿ ಬೇವೂರಿನ ಸರ್ಕಾರಿ ಪ.ಪೂ. ಕಾಲೇಜು ವಿದ್ಯಾರ್ಥಿ ಲಿಂಗಪ್ಪ ಎಂ. ಗೊಲ್ಲರ್ ಹಾಗೂ ಪದವಿ ಕಾಲೇಜು ವಿಭಾಗದಲ್ಲಿ ದದೇಗಲ್‌ನ ಎಂ.ಎಸ್.ಡಬ್ಲ್ಯೂ ಕಾಲೇಜಿನ ಶ್ರೀಧರ ಅವರು ಸಂಬಂಧಪಟ್ಟ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.  ಗವಿಸಿದ್ದೇಶ್ವರ ಜಾತ್ರೆಯ ಅಂಗವಾಗಿ ಬಾಲ್ಯ ವಿವಾಹ ನಿರ್ಮೂಲನೆ ನಿಟ್ಟಿಯಲ್ಲಿ ಗವಿಮಠ, ಜಿಲ್ಲಾಡಳಿತ, ಯುನಿಸೆಫ್ ಮಕ್ಕಳ ರಕ್ಷಣಾ ಯೋಜನೆ ಮತ್ತು ವಾರಿಯರ್‍ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.  ಶಾಲಾ, ಕಾಲೇಜು ಹಂತದಲ್ಲಿ ಪ್ರಬಂಧ ಸ್ಪರ್ಧೆ ಆಯೋಜಿಸಿ, ಅತ್ಯುತ್ತಮ ಪ್ರಬಂಧ ಸ್ಪರ್ಧೆ ಬರೆದ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ, ಜಿಲ್ಲಾ ಮಟ್ಟದಲ್ಲಿ ಪ್ರಬಂಧ ಸ್ಪರ್ಧೆ ನಡೆಸಲಾಯಿತು.  ಜಿಲ್ಲೆಯ ವಿವಿಧ ಪ್ರೌಢಶಾಲೆ, ಕಾಲೇಜುಗಳಿಂದ ೧೨೮ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.  ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಜ. ೨೮ ರಂದು ಗವಿಸಿದ್ದೇಶ್ವರ ಜಾತ್ರೆಯ ಕೈಲಾಸ ಮಂಟಪದಲ್ಲಿ ಜರುಗುವ ಚಿಂತನಗೋಷ್ಠಿಯಲ್ಲಿ ನಿವೃತ್ತ ನ್ಯಾಯಮೂರ್ತಿಗಳು ಹಾಗೂ ಬಾಲ್ಯ ವಿವಾಹ ನಿರ್ಮೂಲನಾ ಸಮಿತಿ ಅಧ್ಯಕ್ಷರೂ ಆಗಿರುವ ಶಿವರಾಜ ಪಾಟೀಲರು ಪ್ರಶಸ್ತಿ ಪ್ರದಾನ ಮಾಡುವರು ಎಂದು ಯುನಿಸೆಫ್‌ನ ಸಂಯೋಜಕ ಹರೀಶ್ ಜೋಗಿ ತಿಳಿಸಿದ್ದಾರೆ.
Please follow and like us:
error