ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್: ವೈದ್ಯಕೀಯ ಪರೀಕ್ಷೆ

ಕೊಪ್ಪಳ ನ. ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿಯ ಅರ್ಹ ಅಭ್ಯರ್ಥಿಗಳ ದಾಖಲಾತಿಗಳ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ನ. ೧೭ ರಂದು ಬೆಳಿಗ್ಗೆ ೧೦ ಗಂಟೆಗೆ ಕೊಪ್ಪಳ ತಹಸಿಲ್ದಾರರ ಕಚೇರಿ ಹತ್ತಿರವಿರುವ ಜಿಲ್ಲಾ ಪೊಲೀಸ್ ಸಮುದಾಯ ಭವನ, ಪೊಲೀಸ್ ಪರೇಡ್ ಗ್ರೌಂಡ್ ಆವರಣದಲ್ಲಿ ಏರ್ಪಡಿಸಲಾಗಿದೆ.
ಅರ್ಹ ಅಭ್ಯರ್ಥಿಗಳಿಗೆ ಈಗಾಗಲೆ ಅಂಚೆ ಮೂಲಕ ಕರೆಪತ್ರವನ್ನು ರವಾನಿಸಲಾಗಿದ್ದು, ಆನ್‌ಲೈನ್ ಮತ್ತು ಆಫ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಕರೆಪತ್ರಗಳನ್ನು ವೆಬ್‌ಸೈಟ್ ತಿತಿತಿ.ಞsಠಿ.gov.iಟಿ ದಿಂದ ಪಡೆಯಬಹುದಾಗಿದೆ. ಕರೆಪತ್ರವನ್ನು ಪಡೆಯದೆ ದಾಖಲಾತಿ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದಿಲ್ಲ.  ಕರೆಪತ್ರದ ಜೊತೆಗೆ ನಮೂದಿಸಿದ ಎಲ್ಲ ಮೂಲ ದಾಖಲಾತಿಗಳನ್ನು ತರಬೇಕು. ನಿಗದಿತ ದಿನಾಂಕ ಹಾಗೂ ಸಮಯದಲ್ಲಿ ಹಾಜರಾಗದಿದ್ದಲ್ಲಿ ಅಂತಹ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

Leave a Reply