ಹನುಮಂತಪ್ಪ ಅಂಡಗಿ ಸಂಪಾದಿತ ’ಮನಸ್ಸು ಮಲ್ಲಿಗೆ’ ಅಭಿನಂದನಾ ಗ್ರಂಥ ಬಿಡುಗಡೆ

  ಶನಿವಾರ ಸಾಯಂಕಾಲ ಕೊಪ್ಪಳದ ಗವಿಮಠದಲ್ಲಿ ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಹನುಮಂತಪ್ಪ ಅಂಡಗಿ ಚಿಲವಾಡಗಿ ಸಂಪಾದಿತ ಡಾ. ಮಹಾಂತೇಶ ಮಲ್ಲನಗೌಡರ ಅವರ ಅಭಿನಂದನಾ ಗ್ರಂಥ ’ಮನಸ್ಸು ಮಲ್ಲಿಗೆ’ ಯನ್ನು ಕೊಪ್ಪಳ ಗವಿಮಠದ ಅಭಿನವ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಬಿಡುಗಡೆಗೊಳಿಸಿದರು.
ಹಿರಿಯ ಸಾಹಿತಿಗಳು ಹಾಗೂ ನೇಹ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷರಾದ ಡಾ. ಮಹಾಂತೇಶ ಮಲ್ಲನಗೌಡರ,  ಗ್ರಂಥದ ಸಂಪಾದಕರು ಹಾಗೂ ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಹನುಮಂತಪ್ಪ ಅಂಡಗಿ ಚಿಲವಾಡಗಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply