ಜಂಗಮ ಮಹಾಸಭಾ ಗೌ.ಅಧ್ಯಕ್ಷರಾಗಿ ಹೇರೂರ ಆಯ್ಕೆ


ಗಂಗಾವತಿ: ಅಖಿಲ ಕರ್ನಾಟಕ ಜಂಗಮ ಕ್ಷೇಮಾಭಿವೃದ್ಧಿ ಮಹಾಸಭಾ(ರಿ), ಬೆಂಗಳೂರು ಈ ಸಂಸ್ಥೆಯ ಗಂಗಾವತಿ ತಾಲೂಕ ಘಟಕದ ಗೌರವ ಅಧ್ಯಕ್ಷರಾಗಿ ಮಹಾಸಭಾದ ಕಾನೂನು ಸಲಹಾ ಸಮಿತಿಯ ಸದಸ್ಯರಾದ ಅಶೋಕಸ್ವಾಮಿ ಹೇರೂರ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ರಾಜ್ಯ ಮಹಾಸಭಾದ ಅಧ್ಯಕ್ಷ ಎಸ್.ಆರ್.ನವಲಿ ಹಿರೇಮಠ ನೇತೃತ್ವದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಪ್ರಸ್ತುತ ಅಶೋಕಸ್ವಾಮಿ ಹೇರೂರ ಕೊಪ್ಪಳ ಜಿಲ್ಲಾ ವಾಣಿಜ್ಯೋದ್ಯಮ ಮತ್ತು ಕೈಗಾರಿಕಾ ಸಂಸ್ಥೆ, ಜಿಲ್ಲಾ ಔಷಧ ವ್ಯಾಪಾರಿಗಳ ಸಂಘ, ರಾಜ್ಯ ಔಷಧ ತಜ್ಞರ ಸಂಘ ಹಾಗೂ ಮುಂತಾದ ಸಂಸ್ಥೆಗಳ ಅಧ್ಯಕ್ಷರಾಗಿ ಮತ್ತು ರಾಜ್ಯ ಔಷಧ ವ್ಯಾಪಾರಿಗಳ ಒಕ್ಕೂಟದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು, ಇನ್ನೂ ಹಲವಾರು ಸಂಘ-ಸಂಸ್ಥೆಗಳ ಪದಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೇರೂರ ಅವರ ಆಯ್ಕೆಯನ್ನು ಹಲವರು ಸ್ವಾಗತಿಸಿದ್ದಾರೆ.

Please follow and like us:
error