fbpx

ಶೌಚಾಲಯ ನಿರ್ಮಾಣದಿಂದ ಕುಟುಂಬದ ಆರೋಗ್ಯ ಸುಧಾರಣೆ ರವಿ ಬಸರಿಹಳ್ಳಿ.

ಕೊಪ್ಪಳ,
ನ.೨೦ (ಕರ್ನಾಟಕ ವಾರ್ತೆ)  ಪ್ರತಿಯೊಂದು ಕುಟುಂಬ ವೈಯಕ್ತಿಕ ಶೌಚಾಲಯವನ್ನು
ನಿರ್ಮಿಸಿಕೊಳ್ಳುವುದರಿಂದ ಕುಟುಂಬದ ಆರೋಗ್ಯ ಸುಧಾರಿಸುವುದರ ಜೊತೆಗೆ ಪರಿಸರದ ನೈರ್ಮಲ್ಯ
ಕಾಪಾಡಿದಂತಾಗುತ್ತದೆ ಎಂದು ಕೊಪ್ಪಳ ಜಿಲ್ಲಾ ಪಂಚಾಯತ್‌ನ ಯೋಜನಾ ನಿರ್ದೇಶಕ ರವಿ
ಬಸರಿಹಳ್ಳಿ ಹೇಳಿದರು.
     ಕೊಪ್ಪಳ ತಾಲೂಕಾ ಪಂಚಾಯತಿ ವತಿಯಿಂದ ವಿಶ್ವ ಶೌಚಾಲಯ
ದಿನಾಚ
    
ರಾಜ್ಯದಲ್ಲಿ ಕಳೆದ ಸಾಲಿನಲ್ಲಿ ಅತೀ ಹೆಚ್ಚು ಪ್ರಮಾಣದಲ್ಲಿ ವೈಯಕ್ತಿಕ ಶೌಚಾಲಯ ಹೊಂದಿ
ರಾಜ್ಯದಲ್ಲಿ ಕೊಪ್ಪಳ ಜಿಲ್ಲೆ ಮಾದರಿ ಜಿಲ್ಲೆಯಾಗಿದೆ. ಈ ನಿಟ್ಟಿನಲ್ಲಿ ಇನ್ನು ಹೆಚ್ಚಿನ
ಪ್ರಮಾಣದಲ್ಲಿ ವೈಯಕ್ತಿಕ ಶೌಚಾಲಯಗಳನ್ನು ನಿರ್ಮಿಸಿಕೊಳ್ಳಲು ಜಿಲ್ಲಾ ಪಂಚಾಯಿತಿಯು
ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಸಾರ್ವಜನಿಕರಿಗೆ ಅರಿವು
ಮೂಡಿಸುತ್ತಿದೆ ಎಂದು ಅವರು ತಿಳಿಸಿದರು.
     ಕಾರ್ಯಕ್ರಮದಲ್ಲಿ ತಾಲೂಕಾ ಪಂಚಾಯತಿ
ಕಾರ್ಯನಿರ್ವಾಹಕ ಅಧಿಕಾರಿ ಟಿ.ಕೃಷ್ಣಮೂರ್ತಿ, ಗ್ರಾಮ ಪಂಚಾಯತಿ ಅಧ್ಯಕ್ಷ ಶರಣಪ್ಪ
ಬೊಮ್ಮನಾಳ, ಉಪಾಧ್ಯಕ್ಷೆ ದುರುಗವ್ವ ಪೂಜಾರ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಕೆ.ವಾಗೀಶ,
ಕಾರ್ಯದರ್ಶಿ ಅಮರೇಶ ಕುದ್ರಿಮೋತಿ, ಶಾಲಾ ಮುಖ್ಯೋಪಾಧ್ಯಾಯರು, ಶಾಲಾ ಮಕ್ಕಳು,
ಅಂಗನವಾಡಿ ಕಾರ್ಯರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ
ಉಪಸ್ಥಿತರಿದ್ದರು. ಬಳಿಕ ಶೌಚಾಲಯ ಜಾಗೃತಿ ಜಾಥಾವು ಸಾರ್ವಜನಿಕರಲ್ಲಿ ಅರಿವು ಮೂಡಿಸಲು
ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.

ರಣೆ ಅಂಗವಾಗಿ ತಾಲೂಕಿನ ಹಾಸಗಲ್ ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಶಾಲಾ ಮಕ್ಕಳಿಂದ
ಶೌಚಾಲಯ ಜಾಗೃತಿ ಜಾಥಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

Please follow and like us:
error

Leave a Reply

error: Content is protected !!