ಮಾ. ೧೩ ರಂದು ಭಾಗ್ಯನಗರದಲ್ಲಿ ಜಿಲ್ಲಾ ಮಟ್ಟದ ಮಹಿಳಾ ದಿನಾಚರಣೆ ಕಾರ್ಯಕ್ರಮ

: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತಿ, ತಾಲೂಕಾ ಪಂಚಾಯತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸ್ತ್ರೀಶಕ್ತಿ ಒಕ್ಕೂಟಗಳು ಹಾಗೂ ಮಹಿಳಾ ಮಂಡಳಿಗಳ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಮಾ. ೧೩ ರಂದು ಬೆಳಿಗ್ಗೆ ೧೧ ಗಂಟೆಗೆ ಭಾಗ್ಯನಗರದ ಗಂಗಮ್ಮ ಲಕ್ಷ್ಮಣಸಾ ಖೋಡೆ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.
  ಸಮಾರಂಭದ ಉದ್ಘಾಟನೆಯನ್ನು ಸಂಸದ ಶಿವರಾಮಗೌಡ ಅವರು ನೆರವೇರಿಸುವರು.  ಕೊಪ್ಪಳ ಶಾಸಕ ಸಂಗಣ್ಣ ಕರಡಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಡಾ. ಡಿ.ಎಂ. ನಂಜುಂಡಪ್ಪ ವರದಿ ಅನುಷ್ಠಾನ ಸಮಿತಿ ಅಧ್ಯಕ್ಷ್ಯ ಸುನೀಲ್ ವಲ್ಯಾಪುರೆ, ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಹೈದ್ರಾಬಾದ್-ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಅಮರನಾಥ ಪಾಟೀಲ, ಕಾಡಾ ಅಧ್ಯಕ್ಷ ಬಸನಗೌಡ ಬ್ಯಾಗವಾಟ, ಜಿ.ಪಂ. ಅಧ್ಯಕ್ಷೆ ಜ್ಯೋತಿ ಬಿಲ್ಗಾರ್, ಶಾಸಕರುಗಳಾದ ಅಮರೇಗೌಡ ಬಯ್ಯಾಪುರ, ಪರಣ್ಣ ಮುನವಳ್ಳಿ, ಈಶಣ್ಣ ಗುಳಗಣ್ಣವರ, ಶಿವರಾಜ ತಂಗಡಗಿ, ಶಶಿಲ್ ನಮೋಶಿ, ಹೆಚ್.ಸಿ. ನೀರಾವರಿ, ಮನೋಹರ ಮಸ್ಕಿ, ಹಾಲಪ್ಪ ಆಚಾರ್, ಜಿ.ಪಂ. ಉಪಾಧ್ಯಕ್ಷೆ ಸೀತಾ ಹಲಗೇರಿ, ತಾ.ಪಂ. ಅಧ್ಯಕ್ಷ್ ನಾಗರಾಜ ಚೆಳ್ಳಳ್ಳಿ, ನಗರಸಭೆ ಅಧ್ಯಕ್ಷ ಸುರೇಶ್ ದೇಸಾಯಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಪ್ಪಣ್ಣ ಪದಕಿ, ತಾ.ಪಂ. ಉಪಾಧ್ಯಕ್ಷೆ ಲಕ್ಷ್ಷ್ಷ್ಮಮ್ಮ ನೂರೇಶ್ ಪವಾರ್, ಭಾಗ್ಯನಗರ ಗ್ರಾ.ಪಂ. ಅಧ್ಯಕ್ಷೆ ಲಕ್ಷ್ಮೀದೇವಿ ಅಡ್ಡೇದಾರ, ಉಪಾಧ್ಯಕ್ಷ ಶ್ರೀಧರ ವಿರುಪಾಕ್ಷಪ್ಪ ಹುರಕಡ್ಲಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ರಾಜ್ಯ ವಕೀಲರ ಪರಿಷತ್ ಸದಸ್ಯೆ ಹಾಗೂ ಜಿಲ್ಲಾ ಮಹಿಳಾ ಒಕ್ಕೂಟದ ಅಧ್ಯಕ್ಷೆ ಸಂಧ್ಯಾ ಮಾದಿನೂರ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.  ಇದೇ ಸಂದರ್ಭದಲ್ಲಿ ಅಗಳಕೇರಾದ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಜಿ. ಗೀತಾ ಅವರು ಮಹಿಳೆ ಮತ್ತು ಪಂಚಾಯತಿ ರಾಜ್ ವ್ಯವಸ್ಥೆ, ಇರಕಲ್ಲಗಡ ಪ್ರಾ.ಆ.ಕೇಂದ್ರದ ವೈದ್ಯಾಧಿಕಾರಿ ಡಾ. ಸೀಮಾ ರುದ್ರಪ್ಪ ಮಾಬಳೆ- ಮಹಿಳೆ ಮತ್ತು ಆರೋಗ್ಯ, ಜಿಲ್ಲಾ ಬಾಲ ನ್ಯಾಯಮಂಡಳಿ ಸದಸ್ಯೆ ಸಾವಿತ್ರಿ ಮುಜುಂದಾರ್- ಮಹಿಳೆ ಮತ್ತು ಸಬಲೀಕರಣ, ಯಲಬುರ್ಗಾ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲಲಿತಾ ನಾಯಕರ್- ಮಹಿಳೆ ಮತ್ತು ಪೌಷ್ಠಿಕಾಂಶ ಮತ್ತು ನ್ಯಾಯವಾದಿ ಕಾಳಮ್ಮ ಪತ್ತಾರ್ ಅವರು ಮಹಿಳೆ ಮತ್ತು ನಾಯಕತ್ವ ಹಾಗೂ ಕಾನೂನು ಕುರಿತಂತೆ ವಿಶೇಷ ಉಪನ್ಯಾಸ ನೀಡುವರು.  ಇದೇ ಸಂದರ್ಭದಲ್ಲಿ ೨೦೧೧-೧೨ನೇ ಸಾಲಿನಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪಡೆದ ಜಿಲ್ಲೆಯ ಇಬ್ಬರು ಮಹಿಳೆಯರಿಗೆ ಸನ್ಮಾನ ಹಾಗೂ ಮಕ್ಕಳಿಗೆ ಭಾಗ್ಯಲಕ್ಷ್ಮಿ ಬಾಂಡ್ ವಿತರಣೆ ನಡೆಯಲಿದೆ.

Leave a Reply