You are here
Home > Koppal News > ಸದೃಢ ರಾಷ್ಟ್ರ ಕಟ್ಟಲು ತಪ್ಪದೇ ಮತದಾನ ಮಾಡಿ – ಡಿ.ಕೆ. ರವಿ

ಸದೃಢ ರಾಷ್ಟ್ರ ಕಟ್ಟಲು ತಪ್ಪದೇ ಮತದಾನ ಮಾಡಿ – ಡಿ.ಕೆ. ರವಿ

  ಸದೃಢ ರಾಷ್ಟ್ರ ನಿರ್ಮಾಣಕ್ಕಾಗಿ ದೇಶದ ಪ್ರತಿಯೊಬ್ಬ ನಾಗರೀಕ ತಪ್ಪದೇ ಮತದಾನ ಮಾಡಬೇಕು ಎಂದು ಕೊಪ್ಪಳ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಿ.ಕೆ.ರವಿ ಮತದಾರರಿಗೆ ಕರೆ ನೀಡಿದರು.
    ಜಿಲ್ಲಾ ಪಂಚಾಯತ ಕೊಪ್ಪಳ, ಗಂಗಾವತಿ ತಾಲೂಕು ಆಡಳಿತ, ತಾಲೂಕು ಪಂಚಾಯತ, ನಗರಸಭೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಯುವಜನ ಕ್ರೀಡೆ ಸೇರಿದಂತೆ ವಿವಿಧ ಇಲಾಖೆಗಳು ಇಂದು ನಗರ ಶಾಸಕರ ಬಾಲಕಿಯರ ಮಾದರಿ ಹಿರಿಯ ಪ್ರಾಥಮಿ ಶಾಲೆಯಲ್ಲಿ ಸ್ವೀಪ್ ಕಾರ್ಯಕ್ರಮದಡಿ ಏರ್ಪಡಿಸಲಾಗಿದ್ದ ಮತದಾರರ ಜಾಗೃತಿ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು.
      ಪ್ರತಿಯೊಬ್ಬ ಮತದಾರನು ನಿರ್ಭಯದಿಂದ ಮತ ಚಲಾಯಿಸಬೇಕು.  ಜಾತಿ, ಹಣ, ಮತ್ತಿತರ ಆಮಿಷಗಳಿಗೆ ಬಲಿಯಾಗದೇ ಮತ ಚಲಾಯಿಸುತ್ತೇವೆ ಎಂದು ಪ್ರಮಾಣ ಮಾಡಬೇಕು.  ಶೇಕಡವಾರು ಮತದಾನ ಹೆಚ್ಚಾಗುವಂತೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸಬೇಕು ಎಂದರು. 
    ನಗರದ ಚನ್ನಬಸವಸ್ವಾಮಿ ವೃತ್ತದಲ್ಲಿ ಮತದಾನ ಜಾಗೃತಿಗಾಗಿ ಮ್ಯಾರಾಥಾನ್ ಓಟ ನಡೆಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.  ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಮಂಜುನಾಥ, ತಹಶೀಲ್ದಾರ ದಿನೇಶಕುಮಾರ, ತಾಲೂಕು ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ಎಸ್.ಎನ್. ಮಠ, ನಗರಸಭೆ ಪೌರಾಯುಕ್ತ ನಿಂಗಪ್ಪ ಕುಮ್ಮಣ್ಣನವರ, ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ, ಪದವಿ ಕಾಲೇಜಿನ ಪ್ರಾಚಾರ್ಯ ಪುಟ್ಟಸ್ವಾಮಿ, ಉಪನ್ಯಾಸಕ ರಮೇಶ ಗಬ್ಬೂರು, ಚುನಾವಣಾಧಿಕಾರಿ ವಿರೇಶ ಹುನುಗುಂದ, ಗುರುರಾಜ ಮುಕ್ಕುಂದಿ ಉಪಸ್ಥಿತರಿದ್ದರು.  ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಕಾಲೇಜಿನ ಪ್ರಾಧ್ಯಾಪಕರು, ವಿದ್ಯಾರ್ಥಿಗಳು, ಶಿಕ್ಷಕಕ, ಶಿಕ್ಷಕಿಯರು ಭಾಗವಹಿಸಿದ್ದರು.

Leave a Reply

Top